ಮಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದರು. ಇಬ್ಬರೂ ಜಯಶಾಲಿಯಾಗಿದ್ದಾರೆ. ಚುನಾವಣೆ ವೇಳೆ ಅಡ್ಡ ಮತದಾನ ನಡೆದಿದೆ. ಇದರಿಂದ ನಾನು ಸೇರಿದಂತೆ ಲಕ್ಷಾಂತರ ಕಾರ್ಯಕರ್ತರು ಬಹಳ ನೋವನ್ನು ಅನುಭವಿಸುವಂತಾಗಿದೆ. ಬಿಜೆಪಿ ಶಾಸಕರಿಂದ ಅಡ್ಡ ಮತದಾನವು ಬೇರೆ ಬೇರೆ ಚರ್ಚೆಗೆ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದ್ದಾರೆ.
ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.
ಇದನ್ನೂ ಓದಿ :
ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ಆಗಬೇಕೆಂದು ಹೇಳಿದ್ದು ನಿಜ ಎಂದ ಅವರು, ಪಕ್ಷದ ಹಿರಿಯ ನಾಯಕರ ಅಭಿಪ್ರಾಯ- ಕಿವಿಮಾತಿನನ್ವಯ ಅವರೆಲ್ಲರ ಮಾತಿಗೆ ಗೌರವ ಕೊಟ್ಟು ಕ್ಷೇತ್ರದ ಭಕ್ತನಾಗಿ ಪ್ರಾರ್ಥನೆ ಸಲ್ಲಿಸಲು ಬಂದಿರುವುದಾಗಿ ತಿಳಿಸಿದರು.
ಸಾಕಷ್ಟು ಅಪಪ್ರಚಾರ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಎಲ್ಲೋ ಒಂದು ಕಡೆ ನಾನೇ ಅಡ್ಡ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದ್ದೇನೆ ಎಂಬ ಆರೋಪಗಳೂ ಸಾಮಾಜಿಕ ಜಾಲತಾಣ, ಪತ್ರಿಕಾ ಮಾಧ್ಯಮದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಚರ್ಚೆಗೆ ಕಾರಣವಾದುದು ನಮ್ಮವರೇ ಎಂಬ ಅರಿವು ನನಗಿದೆ ಎಂದರು.
ಇದನ್ನೂ ಓದಿ :
ಪ್ರಧಾನಿ ಮೋದಿ, ಪಕ್ಷದ ಹಿಂದಿನ ಅಧ್ಯಕ್ಷ ಅಮಿತ್ ಶಾ ಮತ್ತು ಪಕ್ಷದ ಹಿರಿಯರ ಆಶೀರ್ವಾದದಿಂದ ಕೆಲಸ ಮಾಡುತ್ತಿದ್ದೇನೆ. ರಾಜ್ಯಾಧ್ಯಕ್ಷನಾಗಿ ಇಂಥ ಕೀಳು ಮಟ್ಟದ ಕೆಲಸ ಮಾಡುವ ಪ್ರಶ್ನೆಯೇ ಉದ್ಭವವಾಗದು. ವಿಜಯೇಂದ್ರ- ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧವೂ ಇಲ್ಲ. ಯಾವುದೇ ಆತ್ಮೀಯತೆಯೂ ನಮ್ಮ ಮಧ್ಯೆ ಇಲ್ಲ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷರಿಗೆ ಕೊಡಬೇಕಾದ ಗೌರವವನ್ನು ಕೊಟ್ಟಿದ್ದೇನೆ. ಒಬ್ಬ ಶಾಸಕನಾಗಿ ರಾಜ್ಯದ ಮುಖ್ಯಮಂತ್ರಿಗೆ ಕೊಡಬೇಕಾದ ಗೌರವವನ್ನು ಕೊಡಬೇಕಾಗುತ್ತದೆ ಎಂದು ತಿಳಿಸಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…