ಗಾಂಧಿನಗರ: ಗುಜರಾತ್ನ ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಮನ್ಸುಖ್ ವಾಸವಾ ಮಂಗಳವಾರದಂದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೇಂದ್ರದ ಬಜೆಟ್ ಸಮಯದಲ್ಲಿ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.
ನಾನು ಇಷ್ಟು ದಿನ ಪಕ್ಷಕ್ಕೆ ನಿಷ್ಠೆಯಿಂದ ದುಡಿದಿದ್ದೇನೆ. ನಾನು ನಿಭಾಯಿಸಬಲ್ಲದಕ್ಕಿಂತ ಹೆಚ್ಚಿನದನ್ನು ಬಿಜೆಪಿ ನನಗೆ ನೀಡಿದೆ. ಇದಕ್ಕಾಗಿ ನಾನು ಪಕ್ಷ ಮತ್ತು ಪಕ್ಷದ ಕೇಂದ್ರ ಮುಖಂಡರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ತಪ್ಪುಗಳಿಂದಾಗಿ ಪಕ್ಷಕ್ಕೆ ಕೆಟ್ಟ ಹೆಸರು ಬರಬಾರದು ಎಂದು ಈಗ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ. ನರ್ಮದಾ ಜಿಲ್ಲೆಯ 121 ಗ್ರಾಮಗಳನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸುವ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಧಿಸೂಚನೆಯನ್ನು ಹಿಂಪಡೆಯಬೇಕೆಂದು ಕೋರಿ ವಾಸವಾ ಅವರು ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.
ಮನ್ಸುಖ್ ಅವರು ಗುಜರಾತ್ನ ಭರೂಚ್ ಕ್ಷೇತ್ರದಿಂದ ಆರು ಬಾರಿ ಕೇಂದ್ರಕ್ಕೆ ಆಯ್ಕೆಯಾಗಿದ್ದರು. ಅವರು 2014ರಿಂದ 2016ರವರೆಗೆ ಕೇಂದ್ರದ ಬುಡಕಟ್ಟು ವ್ಯವಹಾರಗಳ ರಾಜ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…