ವಾಷಿಂಗ್ಟನ್: ಕೊರೊನಾ 2ನೇ ಅಲೆಗೆ ಭಾರತ ತತ್ತರಿಸಿತ್ತಿದೆ. ಭಾರತಕ್ಕೆ ಆಸ್ಟ್ರಾಜೆನೆಕಾ ಲಸಿಕೆಯನ್ನು ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಧ್ವನಿ ಎತ್ತಿದ್ದಾರೆ.
ನನ್ನ ಹೃದಯ ಛಿದ್ರವಾಗುತ್ತಿದೆ. ಕೊರೊನಾದಿಂದ ಭಾರತ ಬಳಲುತ್ತಿದೆ. ಆದರೆ ಈ ಸಂದರ್ಭದಲ್ಲಿ ಅಮೆರಿಕ ತನಗೆ ಅವಶ್ಯಕತೆ ಇರುವುದಕ್ಕಿಂತಲೂ 55 ಕೋಟಿ ಹೆಚ್ಚುವರಿ ವ್ಯಾಕ್ಸಿನ್‍ಗಳನ್ನು ಪಡೆದುಕೊಂಡಿದೆ. ಜಗತ್ತಿನಾದ್ಯಂತ ಆಸ್ಟ್ರಾಜೆನೆಕಾವನ್ನು ಹಂಚಿಕೆ ಮಾಡಿದ್ದಕ್ಕೆ ಧನ್ಯವಾದಗಳು. ಆದರೆ ನನ್ನ ದೇಶ ಭಾರತಲ್ಲಿ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿದೆ. ತುರ್ತಾಗಿ ಭಾರತಕ್ಕೆ ವ್ಯಾಕ್ಸಿನ್ ನೀಡುತ್ತೀರಾ? ಎಂದು ಅಮೆರಿಕಾದ ಅಧ್ಯಕ್ಷ ಜೋ ಬೈಡನ್ ಮತ್ತು ಇತರ ಉನ್ನತ ಅಧಿಕಾರಿಗಳನ್ನು ಪ್ರಿಯಾಂಕಾ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.
ಪ್ರಿಯಾಂಕಾ ಅವರ ಈ ಟ್ವೀಟ್‍ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಲಾಕ್‍ಡೌನ್ ಸಮಯದಲ್ಲಿ ಸ್ಟಾರ್ ಸೆಲೆಬ್ರಿಟಿಗಳು ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ಆದರೆ ಪ್ರಿಯಾಂಕಾ ಪತಿಯೊಂದಿಗೆ ಅಮೆರಿಕಾದಲ್ಲಿ ವಾಸವಾಗಿದ್ದರೂ ಭಾರತದ ಮೇಲಿರುವ ಪ್ರೀತಿ ಕಡಿಮೆಯಾಗಿಲ್ಲ ಎನ್ನುವುದನ್ನು ತೋರಿಸುತ್ತದೆ.
ಮಂಗಳೂರು: ಪ್ರಥಮ ಡೋಸ್ ಲಸಿಕೆ ಪಡೆದಿದ್ದ ಹತ್ತು ಮಂದಿ ಪೊಲೀಸರಿಗೆ ಕೊರೊನಾ ಪಾಸಿಟಿವ್ -Vishwanews24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…