ನನ್ನ ಮಗಳು ಮಾಡಿದ್ದು ತಪ್ಪು; ಆಕೆ ಬೇಲ್ ಮೇಲೆ ಹೊರಗೆ ಬರುವುದು ಬೇಡ, ಜೈಲಿನಲ್ಲೇ ಇರಲಿ : ಅಮೂಲ್ಯ ತಂದೆ ವಾಜೀದ್ -Vishwanews24
ಚಿಕ್ಕಮಗಳೂರು: ನನ್ನ ಮಗಳು ಮಾಡಿದ್ದು ತಪ್ಪು. ಪೊಲೀಸರು ಅವಳ ಕೈ-ಕಾಲು ಮುರಿಯಲಿ ಎಂದು ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ತಂದೆ ವಾಜೀದ್ ಹೇಳಿದ್ದಾರೆ.
ಪುತ್ರಿಯ ದೇಶದ್ರೋಹಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ವಾಜೀದ್ ಅವರು, ನನ್ನ ಮಗಳು ಮಾಡಿದ್ದನ್ನು ಕಂಡಿತ ಒಪ್ಪಿಕೊಳ್ಳುವುದಿಲ್ಲ. ಆಕೆ ಬೇಲ್ ಮೇಲೆ ಹೊರಗೆ ಬರುವುದು ಬೇಡ. 6 ತಿಂಗಳು ಜೈಲಿನಲ್ಲೇ ಇರಲಿ. ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಅಕ್ಷರಶಃ ತಪ್ಪು. ಮಗಳ ನಡೆಯನ್ನು ಎಂದಿಗೂ ಸಹಿಸುವುದಿಲ್ಲ ಎಂದು ತಿಳಿಸಿದರು.
ನಾನು ಎಷ್ಟೇ ಬುದ್ಧಿವಾದ ಹೇಳಿದರೂ ಮಗಳು ಕೇಳುತ್ತಿರಲಿಲ್ಲ. ಕೆಲ ಮುಸ್ಲಿಮರ ಜೊತೆ ಸೇರಿ ಪ್ರಚೋದನಕಾರಿ ಮಾತುಗಳನ್ನು ಆಡುತ್ತಿದ್ದಳು. ಪೊಲೀಸರು ಆಕೆಯನ್ನು ಹೊರಗೆ ಬಿಡುವುದು ಬೇಡ. ನಾನು ಆಕೆಗೆ ಬೇಲ್ ಕೊಡಿಸುವುದಿಲ್ಲ, ಜೈಲಿನಲ್ಲೇ ಇರಲಿ. ಮಗಳ ಪರ ವಾದ ಮಾಡಲು ವಕೀಲರನ್ನು ನೇಮಕ ಮಾಡುವುದಿಲ್ಲ. ಸದ್ಯಕ್ಕೆ ಅವಳನ್ನು ಮನೆಗೂ ಸೇರಿಸುವುದಿಲ್ಲ. ಕಳೆದ ಐದು ದಿನದಿಂದ ಮಗಳು ನನ್ನ ಜೊತೆ ಯಾವುದೇ ಸಂಪರ್ಕದಲ್ಲಿ ಇಲ್ಲ ಎಂದು ಸ್ಪಷ್ಟನೆ ನೀಡಿದರು.
