ನನ್ನ ಮಗಳ ಅತ್ಯಾಚಾರಿಗಳಿಗೂ ಗಲ್ಲು ಶಿಕ್ಷೆ ನೀಡಿ : ನಿರ್ಭಯಾ ತಾಯಿ -Vishwanews24
ನವದೆಹಲಿ : ಪಶುವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಎನ್ಕೌಂಟರ್ ಕುರಿತು ಪ್ರತಿಕ್ರಿಯೆ ನೀಡಿರುವ ನಿರ್ಭಯಾರ ತಾಯಿ ಆಶಾ ದೇವಿ ಸಂತಸ ವ್ಯಕ್ತಪಡಿಸಿದ್ದು, ಪೊಲೀಸರ ಕಾರ್ಯಕ್ಕೆ ಧನ್ಯವಾದ ತಿಳಿಸಿದ್ದಾರೆ.
“ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರ ಹಾಗೂ ಹತ್ಯೆ ಮಾಡಿದ ಆರೋಪಿಗಳನ್ನು ಎನ್ಕೌಂಟರ್ ಮಾಡಿದ ವಿಷಯ ಕೇಳಿ ಸಂತೋಷವಾಗಿದೆ. ನನ್ನ ಮಗಳನ್ನು ಅತ್ಯಾಚಾರ ಮಾಡಿದ ಆರೋಪಿಗಳಿಗೆ ಶೀಘ್ರದಲ್ಲೇ ಗಲ್ಲು ಶಿಕ್ಷೆ ವಿಧಿಸಿ” ಎಂದು ನಿರ್ಭಯಾ ತಾಯಿ ಆಶಾ ದೇವಿ ಆಗ್ರಹಿಸಿದ್ದಾರೆ.
ನಿರ್ಭಯಾ ತಾಯಿ ಆಶಾ ದೇವಿ, “ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಕಾಮುಕರಿಗೆ ಸಿಕ್ಕಿರುವ ಶಿಕ್ಷೆಯಿಂದ ನನಗೆ ಬಹಳ ಸಂತೋಷವಾಗಿದೆ. ಪೊಲೀಸರು ಉತ್ತಮ ಕಾರ್ಯವನ್ನು ನಿರ್ವಹಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿ ಪೊಲೀಸ್ ಸಿಬ್ಬಂದಗಳ ವಿರುದ್ಧ ಯಾವುದೇ ರೀತಿಯ ಕ್ರಮಕೈಗೊಳ್ಳಬಾರದು” ಎಂದು ಮನವಿ ಮಾಡಿದರು.
“ನನ್ನ ಮಗಳ ಮೇಲೆ ನಡೆದ ಅತ್ಯಾಚಾರ ವಿಷಯಕ್ಕೆ ಸಂಬಂಧಿಸಿ ಕಳೆದ 7 ವರ್ಷಗಳಿಂದ ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿದ್ದೇನೆ. ನನ್ನ ಮಗಳ ಅತ್ಯಾಚಾರ ಮಾಡಿದ ಆರೋಪಿಗಳಿಗೂ ಶೀಘ್ರದಲ್ಲೆ ಗಲ್ಲು ಶಿಕ್ಷೆ ನೀಡುವಂತೆ ಈ ಮೂಲಕ ದೇಶದ ನ್ಯಾಯಾಂಗ ವ್ಯವಸ್ಥೆಗೆ ಮನವಿ ಮಾಡಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.
ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಹಾಗೂ ಹತ್ಯೆ ಮಾಡಿದ ಆರೋಪಿಗಳನ್ನು ಇಂದು ಬೆಳಿಗ್ಗೆ ಮಹಜರಿಗಾಗಿ ಕರೆದೊಯ್ಯುದಿದ್ದು ಪರಾರಿಯಾಗಲು ಯತ್ನಿಸಿದಾಗ ಎನ್ಕೌಂಟರ್ ಮಾಡಲಾಗಿದೆ.
