Featured

ನನ್ನ ಮಗಳ ಅತ್ಯಾಚಾರಿಗಳಿಗೂ ಗಲ್ಲು ಶಿಕ್ಷೆ ನೀಡಿ : ನಿರ್ಭಯಾ ತಾಯಿ -Vishwanews24

ನವದೆಹಲಿ : ಪಶುವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಎನ್‍ಕೌಂಟರ್ ಕುರಿತು ಪ್ರತಿಕ್ರಿಯೆ ನೀಡಿರುವ ನಿರ್ಭಯಾರ ತಾಯಿ ಆಶಾ ದೇವಿ ಸಂತಸ ವ್ಯಕ್ತಪಡಿಸಿದ್ದು, ಪೊಲೀಸರ ಕಾರ್ಯಕ್ಕೆ ಧನ್ಯವಾದ ತಿಳಿಸಿದ್ದಾರೆ.

“ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರ ಹಾಗೂ ಹತ್ಯೆ ಮಾಡಿದ ಆರೋಪಿಗಳನ್ನು ಎನ್‌ಕೌಂಟರ್‌ ಮಾಡಿದ ವಿಷಯ ಕೇಳಿ ಸಂತೋಷವಾಗಿದೆ. ನನ್ನ ಮಗಳನ್ನು ಅತ್ಯಾಚಾರ ಮಾಡಿದ ಆರೋಪಿಗಳಿಗೆ ಶೀಘ್ರದಲ್ಲೇ ಗಲ್ಲು ಶಿಕ್ಷೆ ವಿಧಿಸಿ” ಎಂದು ನಿರ್ಭಯಾ ತಾಯಿ ಆಶಾ ದೇವಿ ಆಗ್ರಹಿಸಿದ್ದಾರೆ.

ನಿರ್ಭಯಾ ತಾಯಿ ಆಶಾ ದೇವಿ, “ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಕಾಮುಕರಿಗೆ ಸಿಕ್ಕಿರುವ ಶಿಕ್ಷೆಯಿಂದ ನನಗೆ ಬಹಳ ಸಂತೋಷವಾಗಿದೆ. ಪೊಲೀಸರು ಉತ್ತಮ ಕಾರ್ಯವನ್ನು ನಿರ್ವಹಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿ ಪೊಲೀಸ್‌ ಸಿಬ್ಬಂದಗಳ ವಿರುದ್ಧ ಯಾವುದೇ ರೀತಿಯ ಕ್ರಮಕೈಗೊಳ್ಳಬಾರದು” ಎಂದು ಮನವಿ ಮಾಡಿದರು.

“ನನ್ನ ಮಗಳ ಮೇಲೆ ನಡೆದ ಅತ್ಯಾಚಾರ ವಿಷಯಕ್ಕೆ ಸಂಬಂಧಿಸಿ ಕಳೆದ 7 ವರ್ಷಗಳಿಂದ ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿದ್ದೇನೆ. ನನ್ನ ಮಗಳ ಅತ್ಯಾಚಾರ ಮಾಡಿದ ಆರೋಪಿಗಳಿಗೂ ಶೀಘ್ರದಲ್ಲೆ ಗಲ್ಲು ಶಿಕ್ಷೆ ನೀಡುವಂತೆ ಈ ಮೂಲಕ ದೇಶದ ನ್ಯಾಯಾಂಗ ವ್ಯವಸ್ಥೆಗೆ ಮನವಿ ಮಾಡಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಹಾಗೂ ಹತ್ಯೆ ಮಾಡಿದ ಆರೋಪಿಗಳನ್ನು ಇಂದು ಬೆಳಿಗ್ಗೆ ಮಹಜರಿಗಾಗಿ ಕರೆದೊಯ್ಯುದಿದ್ದು ಪರಾರಿಯಾಗಲು ಯತ್ನಿಸಿದಾಗ ಎನ್‌ಕೌಂಟರ್‌ ಮಾಡಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago