ರಾಮನಗರ: ಬಿಜೆಪಿ ಅಥವಾ ಬೇರೆ ಯಾರೇ ಆಗಲಿ ನನ್ನ ಮಗನನ್ನು ಏನೂ ಮಾಡಲು ಸಾಧ್ಯವಿಲ್ಲ, ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಹೇಳಿದ್ದಾರೆ.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯಲ್ಲಿ ಮಾತನಾಡಿದ ಗೌರಮ್ಮ, ಗಣೇಶ ಹಬ್ಬದ ದಿನದಂದು ತಮ್ಮ ಪೂರ್ವಿಕರಿಗೆ ಎಡೆಯಿಟ್ಟು, ಅವರ ಸಮಾಧಿಗೆ ಪೂಜೆ ಸಲ್ಲಿಸಲು ಮಾಜಿ ಸಚಿವ ಡಿ. ಕೆ ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಅವಕಾಶ ನೀಡದ ಹಿನ್ನೆಲೆ ಮನೆಗೆ ಬಾರದ ಡಿಕೆಶಿ ನೆನೆದು ತಾಯಿ ಗೌರಮ್ಮ ಕಣ್ಣೀರಿಟ್ಟಿದ್ದಾರೆ.
ಇಡಿ ಸಮನ್ಸ್ ಜಾರಿಯಿಂದ ಈ ಬಾರಿ ಹಬ್ಬಕ್ಕೆ ಇಬ್ಬರು ಮಕ್ಕಳು ಬಂದಿಲ್ಲ. ನನ್ನ ಮಗ ಕೊಲೆ ಸುಲಿಗೆ ದರೋಡೆ ಮಾಡಿಲ್ಲ. ವ್ಯಾಪಾರ ವ್ಯವಹಾರ ನಡೆಸಿದ್ದಾರೆ ಅಷ್ಟೆ. ಅದು ಮಾಡುವುದು ತಪ್ಪೇ? ನಾವು ರಾತ್ರೋ ರಾತ್ರಿ ಶ್ರೀಮಂತರಾಗಿಲ್ಲ, ನನ್ನ ಮಾವ ಕೆಂಪೇಗೌಡ ಊರಿನಲ್ಲಿ ದೊಡ್ಡ ಹೆಸರು ಮಾಡಿದ್ದವರು, ಬಿಜೆಪಿಯವರು ನನ್ನ ಮಗನ ರಾಜಕೀಯ ಬೆಳವಣಿಗೆ ಸಹಿಸದೇ ಹೊಟ್ಟೆಕಿಚ್ಚಿನಿಂದ ಈ ರೀತಿ ಮಾಡುತ್ತಿದ್ದಾರೆ ಎಂದು ಮಕ್ಕಳನ್ನ ನೆನಪಿಸಿಕೊಂಡು ತಾಯಿ ಗೌರಮ್ಮ ಕಣ್ಣೀರಿಟ್ಟಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…