Featured

ನನ್ನ ಮತ್ತು ಶ್ರೀರಾಮುಲು ನಡುವೆ ಯಾರ ಮಧ್ಯಸ್ಥಿಕೆ ಬೇಕಾಗಿಲ್ಲ : ಜನಾರ್ದನ ರೆಡ್ಡಿ – vishwanews24

ನಮ್ಮ ಹಾಗೂ ರಾಮುಲು ನಡುವಿನ ಸ್ನೇಹ ಸಾಮಾನ್ಯವಾದುದ್ದಲ್ಲ , ನಲವತ್ತು ವರ್ಷದಿಂದ ಜೊತೆಗಿದ್ದೇವೆ : ಜನಾರ್ದನ ರೆಡ್ಡಿ

ಬಳ್ಳಾರಿ : ನನ್ನ ಮತ್ತು ಬಿ. ಶ್ರೀರಾಮುಲು ನಡುವೆ ಯಾರ ಮಧ್ಯಸ್ಥಿಕೆ ಬೇಕಾಗಿಲ್ಲ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಅವರ ಪುತ್ರ ಕಿರೀಟಿ ಅಭಿನಯದ ಚಲನಚಿತ್ರ ಜೂನಿಯರ್ ಸಿನಿಮಾ ಬಿಡುಗಡೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರ ವೈಮನಸ್ಸು ಶಮನ ಮಾಡಲು ದೆಹಲಿಗೆ ಕರೆದಿರುವ ಕುರಿತು ಮಾಧ್ಯಮದವರು ಪ್ರಶ್ನೆ ಮಾಡಿದಾಗ, ಅದಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮಿಬ್ಬರ ಮಧ್ಯೆ ಯಾರೂ ಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.

ತಮ್ಮ ಮತ್ತು ರಾಮುಲು ಸ್ನೇಹದ ಬಗ್ಗೆ ಈಗ ಮಾತನಾಡೋದು ಬೇಡ ಎಂದು ಹೇಳಿದ ಅವರು, ಯಾವುದೇ ವಿಚಾರದಲ್ಲಿ ಪ್ರೀತಿ ಅಭಿಮಾನ ಅನ್ನೋದು ಒಂದು ಘಟನೆಯಿಂದ ಬದಲಾವಣೆ ಆಗಲ್ಲ. ನಮ್ಮ ಹಾಗೂ ರಾಮುಲು ನಡುವಿನ ಸ್ನೇಹ ಸಾಮಾನ್ಯವಾದುದ್ದಲ್ಲ, ಹದಿನೈದು ಹದಿನಾರು ವಯಸ್ಸಿನವರಾಗಿದ್ದಾಗಿಂದ ಸ್ನೇಹ ಇದೆ. ನಲವತ್ತು ವರ್ಷದಿಂದ ಜೊತೆಗಿದ್ದೇವೆ. ಶೀಘ್ರದಲ್ಲಿ ರಾಮುಲು ನಾನು ಇಬ್ಬರು ಒಟ್ಟಿಗೆ ಜೂನಿಯರ್ ಸಿನಿಮಾ ನೋಡ್ತೇವೆ ಎಂದು ಹೇಳಿದರು.

ಸಹೋದರ ಸೋಮಶೇಖರ್ ರೆಡ್ಡಿ, ಪತ್ನಿ ಅರುಣಾ, ಮಗ ಕಿರಿಟಿ ಜೊತೆಗೆ ಸಿನಿಮಾ ನೋಡಿದ ಜನಾರ್ದನ ರೆಡ್ಡಿ ಸಿನಿಮಾ ಅದ್ಭುತವಾಗಿದೆ ಎಂದಿದ್ದಾರೆ. ಕಿರೀಟಿಗೆ ಚಿಕ್ಕವನಿದ್ದಾಗಿನಿಂದಲೂ ಸಿನಿಮಾ ಬಗ್ಗೆ ಆಸಕ್ತಿ ಇತ್ತು. ಮನೆಯಲ್ಲಿ ಎಷ್ಟೇ ರಾಜಕೀಯ ಇದ್ರೂ, ಮಗ ಸಿನಿಮಾ ಬಿಟ್ಟರೆ ಯಾವುದರ ಬಗ್ಗೆಯೂ ಕಾನ್ಸಂಟ್ರೇಶನ್ ಮಾಡುತ್ತಿರಲಿಲ್ಲ. ಕಿರೀಟಿ ಪುನೀತ್ ರಾಜ್​​ಕುಮಾರ್​​ ಮತ್ತು ಎನ್‌ಟಿಆರ್ ಅವರನ್ನು ನೋಡಿಕೊಂಡು ಬೆಳೆದಿದ್ದಾನೆ. ಜೂನಿಯರ್ ಸಿನಿಮಾ ಯಶಸ್ವಿಯಾಗಲಿದೆ ಎಂದು ಈ ಸಂದರ್ಭದಲ್ಲಿ ಅವರು ಭರವಸೆ ವ್ಯಕ್ತಪಡಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago