ಬಳ್ಳಾರಿ : ನನ್ನ ಮತ್ತು ಬಿ. ಶ್ರೀರಾಮುಲು ನಡುವೆ ಯಾರ ಮಧ್ಯಸ್ಥಿಕೆ ಬೇಕಾಗಿಲ್ಲ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಅವರ ಪುತ್ರ ಕಿರೀಟಿ ಅಭಿನಯದ ಚಲನಚಿತ್ರ ಜೂನಿಯರ್ ಸಿನಿಮಾ ಬಿಡುಗಡೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರ ವೈಮನಸ್ಸು ಶಮನ ಮಾಡಲು ದೆಹಲಿಗೆ ಕರೆದಿರುವ ಕುರಿತು ಮಾಧ್ಯಮದವರು ಪ್ರಶ್ನೆ ಮಾಡಿದಾಗ, ಅದಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮಿಬ್ಬರ ಮಧ್ಯೆ ಯಾರೂ ಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.
ತಮ್ಮ ಮತ್ತು ರಾಮುಲು ಸ್ನೇಹದ ಬಗ್ಗೆ ಈಗ ಮಾತನಾಡೋದು ಬೇಡ ಎಂದು ಹೇಳಿದ ಅವರು, ಯಾವುದೇ ವಿಚಾರದಲ್ಲಿ ಪ್ರೀತಿ ಅಭಿಮಾನ ಅನ್ನೋದು ಒಂದು ಘಟನೆಯಿಂದ ಬದಲಾವಣೆ ಆಗಲ್ಲ. ನಮ್ಮ ಹಾಗೂ ರಾಮುಲು ನಡುವಿನ ಸ್ನೇಹ ಸಾಮಾನ್ಯವಾದುದ್ದಲ್ಲ, ಹದಿನೈದು ಹದಿನಾರು ವಯಸ್ಸಿನವರಾಗಿದ್ದಾಗಿಂದ ಸ್ನೇಹ ಇದೆ. ನಲವತ್ತು ವರ್ಷದಿಂದ ಜೊತೆಗಿದ್ದೇವೆ. ಶೀಘ್ರದಲ್ಲಿ ರಾಮುಲು ನಾನು ಇಬ್ಬರು ಒಟ್ಟಿಗೆ ಜೂನಿಯರ್ ಸಿನಿಮಾ ನೋಡ್ತೇವೆ ಎಂದು ಹೇಳಿದರು.
ಸಹೋದರ ಸೋಮಶೇಖರ್ ರೆಡ್ಡಿ, ಪತ್ನಿ ಅರುಣಾ, ಮಗ ಕಿರಿಟಿ ಜೊತೆಗೆ ಸಿನಿಮಾ ನೋಡಿದ ಜನಾರ್ದನ ರೆಡ್ಡಿ ಸಿನಿಮಾ ಅದ್ಭುತವಾಗಿದೆ ಎಂದಿದ್ದಾರೆ. ಕಿರೀಟಿಗೆ ಚಿಕ್ಕವನಿದ್ದಾಗಿನಿಂದಲೂ ಸಿನಿಮಾ ಬಗ್ಗೆ ಆಸಕ್ತಿ ಇತ್ತು. ಮನೆಯಲ್ಲಿ ಎಷ್ಟೇ ರಾಜಕೀಯ ಇದ್ರೂ, ಮಗ ಸಿನಿಮಾ ಬಿಟ್ಟರೆ ಯಾವುದರ ಬಗ್ಗೆಯೂ ಕಾನ್ಸಂಟ್ರೇಶನ್ ಮಾಡುತ್ತಿರಲಿಲ್ಲ. ಕಿರೀಟಿ ಪುನೀತ್ ರಾಜ್ಕುಮಾರ್ ಮತ್ತು ಎನ್‌ಟಿಆರ್ ಅವರನ್ನು ನೋಡಿಕೊಂಡು ಬೆಳೆದಿದ್ದಾನೆ. ಜೂನಿಯರ್ ಸಿನಿಮಾ ಯಶಸ್ವಿಯಾಗಲಿದೆ ಎಂದು ಈ ಸಂದರ್ಭದಲ್ಲಿ ಅವರು ಭರವಸೆ ವ್ಯಕ್ತಪಡಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…