ನನ್ನ ಮಾತನ್ನು ಮುಗಿಸಲು ಅವಕಾಶ ನೀಡಿದ್ದಲ್ಲಿ ಈ ರೀತಿ ಆಗುತ್ತಿರಲಿಲ್ಲ , ನಾನು ಪಾಕ್‌ ಪರವಲ್ಲ, : ಬಂಧನದ ಬಳಿಕ ಅಮೂಲ್ಯ -Vishwanews24

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿದ ಅಮೂಲ್ಯ ಲಿಯೋನಾ ಬಂಧನದ ಬಳಿಕ ಪಾಕಿಸ್ತಾನದ ಪರವಾಗಿರುವುದು ಆಕೆಯ ಮುಖ್ಯ ಉದ್ದೇಶ ಅಲ್ಲ ಎಂದು ಹೇಳಿದ್ದಾಳೆ. ಹಾಗೆಯೇ ಆಕೆಗೆ ಮಾತನ್ನು ಮುಗಿಸಲು ಅವಕಾಶ ನೀಡಿದ್ದಲ್ಲಿ ಈ ರೀತಿ ಆಗುತ್ತಿರಲಿಲ್ಲ ಎಂದು ಹೇಳಿದ್ದಾಳೆ.

ನ್ಯಾಯಾಂಗ ಬಂಧನದಲ್ಲಿರುವ ಅಮೂಲ್ಯ ಈ ಕುರಿತಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದು “ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಗಳನ್ನು ಪಾಕಿಸ್ತಾನಕ್ಕೆ ಹೋಗುವಂತೆ ಹೇಳುತ್ತಾರೆ. ಆದರೆ ಪ್ರತಿಭಟನೆಯಲ್ಲಿ ಎಲ್ಲಾ ಜನರು ಹಿಂದೂಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗುತ್ತಾರೆ. ಅಲ್ಲಿರುವವರು ಭಾರತದ ಪರವಾಗೇ ಮಾತನಾಡುತ್ತಾರೆ. ನಾನು ಪಾಕಿಸ್ತಾನ ಜಿಂದಾಬಾದ್‌ ಎಂದು ಕೂಗಿದಾಗ ಯಾರೂ ಕೂಡಾ ಅದಕ್ಕೆ ಜಿಂದಾಬಾದ್‌ ಎಂದು ಕೂಗಲಿಲ್ಲ. ಯಾವಾಗ ಪ್ರತಿಭಟನ ನಿರತರು ಅದಕ್ಕೆ ಪ್ರತಿಯಾಗಿ ಘೋಷಣೆ ಕೂಗಿಲಿಲ್ಲವೋ ಅದು ಅವರ ದೇಶ ಭಕ್ತಿಯನ್ನು ತೋರಿಸುತ್ತದೆ. ನಾನು ಆ ಬಳಿಕ ನಾವೆಲ್ಲರೂ ಭಾರತೀಯರು ಎಂದು ಹೇಳಿ ಹಿಂದೂಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಲು ನಿರ್ಧಾರ ಮಾಡಿದ್ದೆ. ಆದರೆ ನಾನು ಒಂದು ಬಾರಿ ಪಾಕಿಸ್ತಾನ ಜಿಂದಾಬಾದ್‌ ಎಂದು ಕೂಗಿದಾಗ ನನ್ನ ಕೈಯಿಂದ ಮೈಕ್‌ನ್ನು ಕಿತ್ತುಕೊಂಡರು. ನಾನು ನನ್ನ ಭಾಷಣವನ್ನು ಪೂರ್ಣಗೊಳಿಸಲು ಅವಕಾಶ ನೀಡುವಂತೆ ಕೋರಿಕೊಂಡೆ ಆದರೆ ಯಾರೂ ಕೂಡಾ ನನ್ನ ಮಾತನ್ನು ಕೇಳಲಿಲ್ಲ” ಎಂದು ಹೇಳಿದ್ದಾಳೆ.

ಪ್ರಸ್ತುತ ಅಮೂಲ್ಯ ಲಿಯೋನಾಳನ್ನು ಪರಪ್ಪನ ಅಗ್ರಹಾರದಲ್ಲಿ ಇರಿಸಲಾಗಿದೆ. ಹಾಗೆಯೇ ಈ ಕಾರ್ಯಕ್ರಮ ಆಯೋಜಕರು ಹಾಗೂ ಅಲ್ಲಿ ಉಪಸ್ಥಿತರಿದ್ದವರನ್ನು ವಿಚಾರಣೆ ಮಾಡಲಾಗಿದೆ.

 

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

10 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

12 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

13 hours ago