ಬೆಂಗಳೂರು: ಸಾವು ನಮ್ಮನ್ನು ಬೇರ್ಪಡಿಸುವವರೆಗೂ ನಾವಿಬ್ಬರೂ ಕೈಯನ್ನು ಹೀಗೆ ಹಿಡಿದಿರಬೇಕು ಎಂಬುದು ನನ್ನ ಇಚ್ಛೆ. ನನ್ನ ಮುಂದಿನ ಜನ್ಮ ಎಂಬುದು ಇದ್ದರೆ, ಆ ಜನ್ಮದಲ್ಲೂ ನೀವೇ ನನ್ನ ಬಾಳ ಸಂಗಾತಿ ಆಗಬೇಕು ಎಂದು ರೇವತಿ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಇದೀಗ ಮೊದಲ ಬಾರಿಗೆ ರೇವತಿ ಮೇಲಿರುವ ಭಾವನೆಯನ್ನು ಹೇಳಿಕೊಂಡಿದ್ದಾರೆ.
“ನನ್ನ ರಾಜಕುಮಾರಿ, ನಿಮ್ಮನ್ನು ತುಂಬಾ ಪ್ರೀತಿಸುತ್ತೇನೆ. ಸಮಯ ಕಳೆದಂತೆ ಸೌಂದರ್ಯ ಮಾಸಬಹುದು. ಆದರೆ ಒಳ್ಳೆಯ ಗುಣ ಸದಾ ನಮ್ಮ ಜೊತೆಯಲ್ಲಿಯೇ ಉಳಿಯುತ್ತದೆ. ನಾನು ನಿಮ್ಮ ವ್ಯಕ್ತಿತ್ವವನ್ನು ಪ್ರೀತಿಸುತ್ತೇನೆ. ನಿಮ್ಮೊಂದಿಗೆ ನಾನು ಕಳೆಯುತ್ತಿರುವ ಪ್ರತಿ ಕ್ಷಣವೂ ಅಮೂಲ್ಯವಾದುದ್ದು. ನಾನು ಪ್ರತಿ ಸೆಕೆಂಡ್ ನಿಮ್ಮನ್ನು ಪ್ರೀತಿಸುತ್ತೇನೆ” ಎಂದು ಭಾವಿ ಪತ್ನಿ ಬಗ್ಗೆ ನಿಖಿಲ್ ಇನ್ಸ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
“ನಿಮ್ಮ ಜೊತೆ ಕೊನೆಯವರೆಗೂ ಇದೇ ರೀತಿ ಇರಲು ಇಷ್ಟಪಡುತ್ತೇನೆ. ಸಾವು ನಮ್ಮನ್ನು ಬೇರ್ಪಡಿಸುವವರೆಗೂ ನಾವಿಬ್ಬರೂ ಕೈಯನ್ನು ಹೀಗೆ ಹಿಡಿದಿರಬೇಕು ಎಂಬುದು ನನ್ನ ಇಚ್ಛೆ. ನನ್ನ ಮುಂದಿನ ಜನ್ಮ ಎಂಬುದು ಇದ್ದರೆ, ಆ ಜನ್ಮದಲ್ಲೂ ನೀವೇ ನನ್ನ ಬಾಳ ಸಂಗಾತಿ ಆಗಬೇಕು” ಎಂದು ರೇವತಿ ಬಗ್ಗೆ ರೊಮ್ಯಾಂಟಿಕ್ ಮೂಡಿನಲ್ಲಿ ನಿಖಿಲ್ ಹೇಳಿದ್ದಾರೆ.
ಅಷ್ಟೇ ಅಲ್ಲದೆ ರೇವತಿ ಕೈಬರಹದಲ್ಲಿ ಬರೆದಿರುವ ಪತ್ರವನ್ನು ನಿಖಿಲ್ ಮತ್ತು ರೇವತಿ ಕೈ-ಕೈ ಹಿಡಿದುಕೊಂಡು ಓದುತ್ತಿರುವ ಫೋಟೋವನ್ನೂ ಇನ್ಸ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಇವರ ವಿವಾಹ ಕಾರ್ಯಕ್ರಮ ಏಪ್ರಿಲ್ 17 ರಾಮನಗರ-ಚನ್ನಪಟ್ಟಣ ನಡುವಿನ ಜನಪದ ಲೋಕದ ಬಳಿ ನಡೆಯಲಿದೆ. ಅದ್ಧೂರಿ ಸೆಟ್‍ನಲ್ಲಿ ಶಾಸ್ತ್ರೋಕ್ತ ಮತ್ತು ವಾಸ್ತು ಪ್ರಕಾರವಾಗಿ ಇವರ ಮದುವೆ ನಡೆಯಲಿದೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್‌ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…