ನನ್ನ ಮುಂದಿನ ಜನ್ಮ ಎಂಬುದು ಇದ್ದರೆ, ಆ ಜನ್ಮದಲ್ಲೂ ನೀವೇ ನನ್ನ ಬಾಳ ಸಂಗಾತಿ ಆಗಬೇಕು : ರೇವತಿಗೆ ನಿಖಿಲ್ ಕುಮಾರಸ್ವಾಮಿ -Vishwanews24

ಬೆಂಗಳೂರು: ಸಾವು ನಮ್ಮನ್ನು ಬೇರ್ಪಡಿಸುವವರೆಗೂ ನಾವಿಬ್ಬರೂ ಕೈಯನ್ನು ಹೀಗೆ ಹಿಡಿದಿರಬೇಕು ಎಂಬುದು ನನ್ನ ಇಚ್ಛೆ. ನನ್ನ ಮುಂದಿನ ಜನ್ಮ ಎಂಬುದು ಇದ್ದರೆ, ಆ ಜನ್ಮದಲ್ಲೂ ನೀವೇ ನನ್ನ ಬಾಳ ಸಂಗಾತಿ ಆಗಬೇಕು ಎಂದು ರೇವತಿ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಇದೀಗ ಮೊದಲ ಬಾರಿಗೆ ರೇವತಿ ಮೇಲಿರುವ ಭಾವನೆಯನ್ನು ಹೇಳಿಕೊಂಡಿದ್ದಾರೆ.

“ನನ್ನ ರಾಜಕುಮಾರಿ, ನಿಮ್ಮನ್ನು ತುಂಬಾ ಪ್ರೀತಿಸುತ್ತೇನೆ. ಸಮಯ ಕಳೆದಂತೆ ಸೌಂದರ್ಯ ಮಾಸಬಹುದು. ಆದರೆ ಒಳ್ಳೆಯ ಗುಣ ಸದಾ ನಮ್ಮ ಜೊತೆಯಲ್ಲಿಯೇ ಉಳಿಯುತ್ತದೆ. ನಾನು ನಿಮ್ಮ ವ್ಯಕ್ತಿತ್ವವನ್ನು ಪ್ರೀತಿಸುತ್ತೇನೆ. ನಿಮ್ಮೊಂದಿಗೆ ನಾನು ಕಳೆಯುತ್ತಿರುವ ಪ್ರತಿ ಕ್ಷಣವೂ ಅಮೂಲ್ಯವಾದುದ್ದು. ನಾನು ಪ್ರತಿ ಸೆಕೆಂಡ್ ನಿಮ್ಮನ್ನು ಪ್ರೀತಿಸುತ್ತೇನೆ” ಎಂದು ಭಾವಿ ಪತ್ನಿ ಬಗ್ಗೆ ನಿಖಿಲ್ ಇನ್ಸ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

“ನಿಮ್ಮ ಜೊತೆ ಕೊನೆಯವರೆಗೂ ಇದೇ ರೀತಿ ಇರಲು ಇಷ್ಟಪಡುತ್ತೇನೆ. ಸಾವು ನಮ್ಮನ್ನು ಬೇರ್ಪಡಿಸುವವರೆಗೂ ನಾವಿಬ್ಬರೂ ಕೈಯನ್ನು ಹೀಗೆ ಹಿಡಿದಿರಬೇಕು ಎಂಬುದು ನನ್ನ ಇಚ್ಛೆ. ನನ್ನ ಮುಂದಿನ ಜನ್ಮ ಎಂಬುದು ಇದ್ದರೆ, ಆ ಜನ್ಮದಲ್ಲೂ ನೀವೇ ನನ್ನ ಬಾಳ ಸಂಗಾತಿ ಆಗಬೇಕು” ಎಂದು ರೇವತಿ ಬಗ್ಗೆ ರೊಮ್ಯಾಂಟಿಕ್ ಮೂಡಿನಲ್ಲಿ ನಿಖಿಲ್ ಹೇಳಿದ್ದಾರೆ.

ಅಷ್ಟೇ ಅಲ್ಲದೆ ರೇವತಿ ಕೈಬರಹದಲ್ಲಿ ಬರೆದಿರುವ ಪತ್ರವನ್ನು ನಿಖಿಲ್ ಮತ್ತು ರೇವತಿ ಕೈ-ಕೈ ಹಿಡಿದುಕೊಂಡು ಓದುತ್ತಿರುವ ಫೋಟೋವನ್ನೂ ಇನ್ಸ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಇವರ ವಿವಾಹ ಕಾರ್ಯಕ್ರಮ ಏಪ್ರಿಲ್ 17 ರಾಮನಗರ-ಚನ್ನಪಟ್ಟಣ ನಡುವಿನ ಜನಪದ ಲೋಕದ ಬಳಿ ನಡೆಯಲಿದೆ. ಅದ್ಧೂರಿ ಸೆಟ್‍ನಲ್ಲಿ ಶಾಸ್ತ್ರೋಕ್ತ ಮತ್ತು ವಾಸ್ತು ಪ್ರಕಾರವಾಗಿ ಇವರ ಮದುವೆ ನಡೆಯಲಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

22 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

23 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

23 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

23 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 day ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 day ago