ಶಿವಮೊಗ್ಗ: ನಾನು ಡಿ.ಕೆ.ಸುರೇಶ್ ಅವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಹೇಳಿಲ್ಲ. ಹೊಸ ಕಾನೂನು ತನ್ನಿ ಎಂದಿದ್ದಷ್ಟೆ. ಸದ್ಯ ನನ್ನ ಪುಣ್ಯ ನಾನು ದೇಶದ್ರೋಹಿ ಎಂದು ಯಾರು ಹೇಳಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಗೃಹ ಸಚಿವರೇ ಈ ಬಗ್ಗೆ ಗಮನಹರಿಸಿ ಕೇಸ್ ದಾಖಲಿಸಿ. ನಾನು ಕೇಂದ್ರ ಗೃಹಮಂತ್ರಿಗೆ ನಾನು ಪತ್ರ ಬರೆಯುತ್ತೇನೆ. ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿಯೆಂದು ನಾನು ಪತ್ರ ಬರೆಯುತ್ತೇನೆ. ಪ್ರಧಾನಿ ಹಾಗೂ ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ. ಕೇಂದ್ರಕ್ಕೆ ಪತ್ರ ಬರೆಯಲು ಪರಮೇಶ್ವರ್ ಹೇಳಿದ್ದಾರೆ, ಹಾಗಾಗಿ ಕೇಂದ್ರಕ್ಕೆ ನಾನು ಪತ್ರ ಬರೆಯುತ್ತೇನೆ ಎಂದರು.
ದಾವಣಗೆರೆಯಲ್ಲಿ ನಡೆದಿದ್ದ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ರಾಷ್ಟ್ರ ದ್ರೋಹಿಗಳ ಗುಂಡಿಕ್ಕಿ ಕೊಲ್ಲುವ ಕಾನೊನು ತರುವಂತೆ ಹೇಳಿಕೆ ನೀಡಿದ್ದ ಈಶ್ವರಪ್ಪ ವಿರುದ್ಧ ದಾವಣಗೆರೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಇಂದು ದಾವಣಗೆರೆ ಪೊಲೀಸರಿಂದ ಈಶ್ವರಪ್ಪ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಶಿವಮೊಗ್ಗದ ಈಶ್ವರಪ್ಪ ಅವರ ನಿವಾಸಕ್ಕೆ ಬಂದಿದ್ದ ದಾವಣಗೆರೆ ಬಡಾವಣೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಈಶ್ವರಪ್ಪ, ದಾವಣಗೆರೆ ಪೊಲೀಸರು ನೋಟಿಸ್ ಕೊಟ್ಟಿರುವುದು ಹೌದು. ಎಫ್ ಐಆರ್ ಹಾಕಿರುವುದು ಸತ್ಯ. ನನ್ನ ಮೇಲೆ ನೂರು ಎಫ್ಐಆರ್ ಹಾಕಿದರೂ ಕೂಡಾ ಹೆದರುವುದಿಲ್ಲ. ಎಫ್ಐಆರ್ ಹಾಕಿದರೂ ನಾನು ಈವರೆಗೂ ಒಂದು ರೂಪಾಯಿ ಫೈನ್ ಕಟ್ಟಿಲ್ಲ ಎಂದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…