ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸಿದವರಿಗೆ ಜನರೆ ಸರಿಯಾದ ಉತ್ತರ ನೀಡಿದ್ದಾರೆ : ಶರದ್ ಪವಾರ್ -Vishwanews24

Featured, ರಾಷ್ಟ್ರ ನ್ಯೂಸ್

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶ ಹೊರ ಬಿದ್ದಿದ್ದು, ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ( ಎನ್ ಸಿಪಿ) 62 ಸ್ಥಾನಗಳನ್ನು ಗೆದ್ದುಕೊಂಡಿದೆ. 220 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿದ್ದ ಬಿಜೆಪಿ ಶಿವಸೇನೆ ಮೈತ್ರಿ 162 ಸ್ಥಾನಗಳನ್ನಷ್ಟೇ ಪಡೆಯಲು ಶಕ್ತವಾಗಿದೆ.

ಫಲಿತಾಂಶದ ನಂತರ ಮಾತನಾಡಿದ ಶರದ್ ಪವಾರ್, ನನ್ನ ರಾಜಕೀಯ ಜೀವನ ಮುಗಿಯಿತು ಎಂದುಕೊಂಡವರಿಗೆ ಈ ಚುನಾವಣಾ ಫಲಿತಾಂಶ ಸರಿಯಾದ ಪಾಠ ಕಲಿಸಿದೆ ಎಂದು ಹೇಳಿದ್ದಾರೆ.

ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸಿದವರಿಗೆ ಜನರೆ ಸರಿಯಾದ ಉತ್ತರ ನೀಡಿದ್ದಾರೆ. ಈ ಚುನಾವಣೆಯೊಂದಿಗೆ ನನ್ನ ರಾಜಕೀಯ ಜೀವನ ಅಂತ್ಯವಾಯಿತು ಎಂದವರಿಗೆ ಜನರೆ ಬುದ್ದಿ ಕಲಿಸಿದ್ದಾರೆ ಎಂದು ಎನ್ ಸಿಪಿ ಮುಖಂಡ ಹೇಳಿದ್ದಾರೆ.