ಕೋಲ್ಕತ್ತಾ,:ನನ್ನ ರಾಜಕೀಯ ಜೀವನದಲ್ಲಿ ಕಂಡ ಅತ್ಯಂತ ಅಪಾಯಕಾರಿ ಪ್ರಧಾನಿ ನರೇಂದ್ರ ಮೋದಿ ಅವರು. ನಾನು ರಾಜೀವ್ ಗಾಂಧಿ, ಪಿ.ವಿ. ನರಸಿಂಹ ರಾವ್, ಮನಮೋಹನ್ ಸಿಂಗ್ ಅವರನ್ನು ನೋಡಿದ್ದೇನೆ. ಆದರೆ, ಇಂಥ ‘ಭದ್ರಲೋಕ್’ ಪ್ರಧಾನಿಯನ್ನು ನಾನೆಂದೂ ಕಂಡಿದ್ದಿಲ್ಲ” ಎಂದು ಮಮತಾ ಪ್ರಧಾನಿ ಮೋದಿಯವರ ವಿರುದ್ಧ ಕಿಡಿಕಾರಿದ್ದಾರೆ.
ಪೂರ್ವ ಮಿಡ್ನಾಪೂರ್ ಕ್ಷೇತ್ರದ ನಿಂಟೋರಿಯಲ್ಲಿ ನಡೆದ ಚುನಾವಣಾ ಸಭೆಯನ್ನುದ್ದೇಶಿಸಿ ಈ ಕುರಿತು ಅವರು ಮಾತನಾಡಿದ್ದಾರೆ. ಯಾವತ್ತು ಬೇಕಾದರೂ ನನ್ನ ಕೊಲೆ ಮಾಡಬಹುದು. ಕೊಲೆ ನಂತರ ಅದು ಅಪಘಾತವೆಂದು ಹೇಳಿಕೊಳ್ಳಬಹುದು. ಇದರಿಂದ ನನಗೆ ಯಾವ ಭಯವೂ ಇಲ್ಲ. ಒಂದು ವೇಳೆ ನನ್ನ ಹತ್ಯೆಯಾದರೆ ನನ್ನ ತಾಯಿ, ತಾಯ್ನೆಲ ಮತ್ತು ನಾಡಿನ ಜನರು ತಿರುಗಿಬೀಳುತ್ತಾರೆ ಎಂದೂ ಎಚ್ಚರಿಕೆ ನೀಡಿದ್ದಾರೆ.
ಮಮತಾ ಅವರು ಮೋದಿ ಅವರನ್ನು ಭದ್ರಲೋಕ್ ಎಂದು ವ್ಯಂಗ್ಯವಾಗಿ ಕುಟುಕಿದ್ದಾರೆ. ಇನ್ನೂ ಮುಂದುವರಿದ ಅವರು ಎನ್ಆರ್ಸಿ ಯೋಜನೆ ಹೆಸರಲ್ಲಿ ತಮ್ಮನ್ನೆಲ್ಲಾ ಹೊರಗೆ ಹಾಕಲು ಬಿಜೆಪಿಯವರು ಚಿತಾವಣಿ ನಡೆಸುತ್ತಿದ್ದು ಆ ಪಕ್ಷಕ್ಕೆ ತಾವ್ಯಾರೂ ಮತ ಹಾಕಬೇಡಿ ಎಂದು ಕರೆ ನೀಡಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…