ಬೆಂಗಳೂರು: ಉತ್ತರ ಪ್ರದೇಶದ ಪುಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳುವ ಕುರಿತು ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ “ಇದು ನನ್ನ ವೈಯಕ್ತಿಕ ನಂಬಿಕೆ ಭಕ್ತಿಯನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ ಎಂದು ಬುಧವಾರ ಹೇಳಿದ್ದಾರ.
ಮಲ್ಲಿಕಾರ್ಜುನ ಖರ್ಗೆ ಅವರ ಇತ್ತೀಚಿನ ಹೇಳಿಕೆಗೆ ಸಂಬಂಧಿಸಿ ಕುಂಭಮೇಳಕ್ಕೆ ಭೇಟಿ ನೀಡುವ ಕುರಿತು ಟೀಕೆಗಳ ಕುರಿತು ಪ್ರತಿಕ್ರಿಯಿಸಿದ ಶಿವಕುಮಾರ್ “ಯಾರು ಬೇಕಾದರೂ ಏನು ಬೇಕಾದರೂ ಹೇಳಲಿ, ನಮ್ಮ ಧರ್ಮ ಮತ್ತು ಕರ್ಮ, ನಮ್ಮ ಆಚರಣೆಗಳು, ಸಂಪ್ರದಾಯಗಳು ಮತ್ತು ನಂಬಿಕೆಗಳ ವಿಷಯವಾಗಿದೆ” ಎಂದರು.
ಗಂಗಾ, ಕಾವೇರಿ, ಕೃಷ್ಣಾ, ಬ್ರಹ್ಮಪುತ್ರ, ಅರ್ಕಾವತಿ ಮತ್ತು ವೃಷಭಾವತಿ ನದಿಗಳೆಲ್ಲ ಯಾರಿಗೂ ಸೇರಿದ್ದಲ್ಲ.ನೀರಿಗೆ ಬಣ್ಣ, ರುಚಿ ಅಥವಾ ಆಕಾರವಿಲ್ಲ. ಪ್ರತಿಯೊಬ್ಬರಿಗೂ ನೀರು ಬೇಕು. ಜನರು ಏನು ಬೇಕಾದರೂ ಹೇಳುತ್ತಾರೆ” ಎಂದರು.
ಆರ್. ಅಶೋಕ್ ಅವರ ಸಮಸ್ಯೆ ಏನು ಎಂದು ನನಗೆ ತಿಳಿದಿಲ್ಲ. ಬಹುಶಃ ಅವರಿಗೆ ಏನಾದರೂ ಸಮಸ್ಯೆ ಇರಬಹುದು. ನನ್ನ ವೈಯಕ್ತಿಕ ನಂಬಿಕೆಗಳ ಬಗ್ಗೆ ಮಾತನಾಡುವ ಹಕ್ಕು ಯಾರಿಗೂ ಇಲ್ಲ. ನಂಬಿಕೆ ಮತ್ತು ಭಕ್ತಿ ನನ್ನ ವೈಯಕ್ತಿಕ ವಿಷಯಗಳು, “ಎಂದರು.
ಶಿವಕುಮಾರ್ ಅವರು ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ತತ್ ಕ್ಷಣ ಕರ್ನಾಟಕದಲ್ಲಿ ಬಡತನ ನಿರ್ಮೂಲನೆಯಾಗುತ್ತದೆಯೇ?” ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪುಶ್ನೆ ಮಾಡಿದ್ದರು.
ನಾನು ಕುಂಭಮೇಳಕ್ಕೆ ಹೋಗುತ್ತೇನೋ ಇಲ್ಲವೋ ಎಂಬುದು ಸಂಪೂರ್ಣವಾಗಿ ನನ್ನ ನಿರ್ಧಾರ. ಇದು ನನ್ನ ವೈಯಕ್ತಿಕ ನಂಬಿಕೆಯ ವಿಷಯ. ನಾನು ಹೋಗುವುದು ಅಥವಾ ಹೋಗದಿರುವುದು ನನ್ನ ವೈಯಕ್ತಿಕ” ಎಂದರು.
ಖರ್ಗೆಯವರ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ, “ಅವರು ಅದನ್ನು ನಿರ್ದಿಷ್ಟ ಸಂದರ್ಭದಲ್ಲಿ ಹೇಳಿದ್ದಾರೆ, ಆದರೆ ಮಾಧ್ಯಮಗಳು ಅದನ್ನು ಏಕ ವಿವಾದ ಮಾಡುತ್ತಿವೆ?” ಎಂದು ಪ್ರಶ್ನಿಸಿದರು.
ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…