ರಾಜ್ಯ ನ್ಯೂಸ್

ನನ್ನ ಸರ್ಕಾರದಲ್ಲಿ ತಲೆಹಾಕಬೇಡಿ ಎಂದು ಅಪ್ಪನಿಗೆ ಖಡಕ್ ವಾರ್ನಿಂಗ್ : ಕುಮಾರಸ್ವಾಮಿ..

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವಂತಹ ನೂತನ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಗೊಂದಲಗಳ ಗೂಡಾಗಿದೆ. ಸದಾ ಕಚ್ಚಾಟದಲ್ಲೇ ಹದಿನೈದು ದಿನಗಳನ್ನು ಕಳೆದಿದ್ದಾರೆ. ಒಂದೆಡೆ ಸಚಿವ ಸಂಪುಟದಲ್ಲಿ ಸ್ಥಾನವನ್ನು ಪಡೆಯಲು ವಿಫಲರಾದ ಶಾಸಕರುಗಳ ಅಸಮಾಧಾನ ಸ್ಫೋಟಗೊಂಡಿದ್ದರೆ, ಮತ್ತೊಂದೆಡೆ ಖಾತೆ ಹಂಚಿಕೆಯಲ್ಲಿ ತಾವು ಇಷ್ಟಪಟ್ಟಿದ್ದ ಖಾತೆಗಳು ಸಿಕ್ಕಿಲ್ಲ ಎಂದು ಬಂಡಾಯವೆದ್ದವರ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ. ಇವೆರಡರ ನಡುವೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಸಿಲುಕಿ ನಲುಗಿ ಹೋಗಿದ್ದಾರೆ. ಜೊತೆ ಜೊತೆಗೇ ತಾವು ಮತ್ತೊಂದು ಪ್ರಮುಖ ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ.

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ತಮ್ಮ ಕುಟುಂಬದ ಸದಸ್ಯರುಗಳ ಕಾಟ ತೀವ್ರವಾಗಿದೆ ಎನ್ನಲಾಗಿದೆ. ತಮ್ಮ ಸಹೋದರ ಎಚ್ ಡಿ ರೇವಣ್ಣ ಅವರು ತಮಗೆ ಸಂಬಂಧಪಟ್ಟಿಲ್ಲದ ಖಾತೆಗಳಿಗೂ ಮೂಗು ತೋರಿಸುತ್ತಿದ್ದಾರೆ ಎನ್ನುವ ಆಪಾದನೆ ಕೇಳಿಬಂದಿದೆ. ಅಧಿಕಾರಿಗಳನ್ನು ಬೇಕಾಬಿಟ್ಟಿ ವರ್ಗಾವಣೆ ಮಾಡುತ್ತಿದ್ದಾರೆ ಎನ್ನುವ ಸುದ್ದಿಯೂ ಹೊರಬಿದ್ದಿದೆ. ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಎಚ್ ಡಿ ರೇವಣ್ಣ ಅವರ ಈ ವರ್ತನೆ ಕುಮಾರಸ್ವಾಮಿಯವರಲ್ಲಿ ಬೇಸರ ತರಿಸಿದೆ. ಜೊತೆಗೆ ಸರ್ಕಾರದ ಉನ್ನತ ಅಧಿಕಾರಿಗಳು ಕೂಡ ಆಗಾಗ್ಗೆ ತಮ್ಮ ತಂದೆ ಎಚ್ ಡಿ ದೇವೇಗೌಡರ ನಿವಾಸಕ್ಕೆ ತೆರಳಿ ಸಲಹೆ ಸೂಚನೆಗಳನ್ನು ಪಡೆಯುತ್ತಿರುವುದು ಕೂಡ ಕುಮಾರಸ್ವಾಮಿ ಅವರ ಕಣ್ಣು ಕೆಂಪಾಗಿಸಿದೆ. ಟೀಕೆಗಳಿಂದ ತಪ್ಪಿಸಿಕೊಳ್ಳಲು ನಮ್ಮ ಸರ್ಕಾರದ ವಿಷಯದಲ್ಲಿ ಸುಮ್ಮನೆ ಮೂಗು ತೂರಿಸಬೇಡಿ ಎಂದು ಕುಟುಂಬದ ಸದಸ್ಯರಿಗೆ ಸಿಎಂ ಖಡಕ್ ವಾರ್ನಿಂಗ್ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇತ್ತ ತಮ್ಮ ತಂದೆ ಎಚ್ ಡಿ ದೇವೇಗೌಡ ಹಾಗೂ ಸಹೋದರ ಎಚ್ ಡಿ ರೇವಣ್ಣ ಅವರಿಗೆ ಬುದ್ಧಿ ಹೇಳಲು ಆಗದೆ, ಅವರನ್ನು ಶಿಸ್ತಿನಲ್ಲಿ ಇಡಲು ಆಗದೆ ಕುಮಾರಸ್ವಾಮಿಯವರು ಪೇಚಿಗೆ ಸಿಲುಕಿ ಒದ್ದಾಡುತ್ತಿರುವುದಂತೂ ಸತ್ಯ.

ಸರ್ಕಾರ ರಚನೆಯಲ್ಲಿ ಹಾಗೂ ಸಂಪುಟ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜೆಡಿಎಸ್ ನ ವರಿಷ್ಠ ನಾಯಕ ಎಚ್ ಡಿ ದೇವೇಗೌಡರು ಈಗ ಕಳೆದ ಕೆಲ ದಿನಗಳಿಂದ ಮೌನಕ್ಕೆ ಶರಣಾಗಿದ್ದಾರೆ. ಸರ್ಕಾರದ ತಂಟೆಗೆ ಬರಬೇಡಿ ಎಂದು ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ ದೇವೇಗೌಡರವರು ಮೌನಕ್ಕೆ ಶರಣಾಗಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿವೆ‌. ಕೆಲ ದಿನಗಳ ಹಿಂದೆ ಅತ್ಯಂತ ಕ್ರಿಯಾಶೀಲರಾಗಿ ಕಾಣಿಸಿಕೊಳ್ಳುತ್ತಿದ್ದ ದೇವೇಗೌಡರು ಇದೀಗ ಹೆಚ್ಚಾಗಿ ರಾಜಕೀಯ ಚಟುವಟಿಕೆಗಳಲ್ಲಿ ಕಂಡು ಬರುತ್ತಿಲ್ಲ. ಕಳೆದ ಜೂನ್ 2 ರಂದು ಪಕ್ಷದ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ದೇವೇಗೌಡರು, ಆ ನಂತರ ಯಾವುದೇ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ದೇವೇಗೌಡರು ಇಷ್ಟು ಬೇಗ ಒಬ್ಬಂಟಿಯಾದರೇ ಎಂಬ ಪ್ರಶ್ನೆಗಳು ಕಾಡುತ್ತಿವೆ.

ಮಾಧ್ಯಮಗಳಿಗೂ ಯಾವುದೇ ಪ್ರತಿಕ್ರಿಯೆಗಳನ್ನು ದೇವೇಗೌಡರು ನೀಡುತ್ತಿಲ್ಲ. ಕಳೆದ ಹತ್ತು ದಿನಗಳಿಂದ ದೇವೇಗೌಡರವರು ಬಹುತೇಕ ತಮ್ಮ ಪದ್ಮನಾಭ ನಗರದ ನಿವಾಸದಲ್ಲಿಯೇ ಮೌನಕ್ಕೆ ಶರಣಾಗಿದ್ದಾರೆ. ಸರ್ಕಾರ ರಚನೆಯಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಿ ಅಷ್ಟೊಂದು ಕ್ರಿಯಾಶೀಲರಾಗಿದ್ದ ದೇವೇಗೌಡರು ಇದೇಕೆ ಇಷ್ಟೊಂದು ಮೌನಕ್ಕೆ ಶರಣಾಗಿದ್ದಾರೆ? ಕುಮಾರಸ್ವಾಮಿ ಅವರೇನಾದರೂ ತಮ್ಮ ಸರ್ಕಾರದ ತಂಟೆಗೆ ಬರಬೇಡಿ ಎಂದು ತಂದೆಗೆ ಸೂಚನೆ ನೀಡಿದ್ದಾರೆಯೇ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಇಡೀ ಸಮ್ಮಿಶ್ರ ಸರ್ಕಾರ ವಿಧಾನಸೌಧದಲ್ಲಿ ನಡೆಯುವುದಿಲ್ಲ. ಬದಲಾಗಿ ದೇವೇಗೌಡರ ಪದ್ಮನಾಭನಗರದ ನಿವಾಸದಲ್ಲಿ ನಡೆಯುತ್ತದೆ ಎಂಬ ಟೀಕೆಗಳು ಈಗಾಗಲೇ ಸರ್ಕಾರದ ಮೇಲೆ ವ್ಯಕ್ತವಾಗಿದೆ. ಈ ವಿಷಯವನ್ನು ಇಟ್ಟುಕೊಂಡು ಈಗಾಗಲೇ ಬಿಜೆಪಿಯ ನಾಯಕರುಗಳು ಸರ್ಕಾರವನ್ನು ಟೀಕಿಸಿದ್ದಾರೆ. ಇನ್ನು ಕಾಂಗ್ರೆಸ್ ನ ಹಲವು ಹಿರಿಯ ನಾಯಕರುಗಳೂ ಕೂಡ ತಮ್ಮ ಆಪ್ತರ ಬಳಿ ಇದೇ ವಿಷಯವನ್ನು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಈ ಇಳಿವಯಸ್ಸಿನಲ್ಲಿಯೂ ಇಡೀ ರಾಜ್ಯದ ಮೂಲೆ ಮೂಲೆ ಸುತ್ತಿ ತಮ್ಮ ಮಗನನ್ನು ಮುಖ್ಯಮಂತ್ರಿ ಮಾಡುವಂತೆ ಮತದಾರರಿಗೆ ಕೈ ಮುಗಿದು ಕೇಳಿಕೊಂಡಿದ್ದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಇದೀಗ ತಮ್ಮ ಮಗ ಮುಖ್ಯಮಂತ್ರಿಯಾದ ನಂತರ ಸಾರ್ವಜನಿಕ ಜೀವನದಿಂದ ಕಾಣಿಸಿಕೊಳ್ಳದೇ ಇರುವುದು ಹಲವು ಅನುಮಾನಗಳನ್ನು ಹುಟ್ಟಿಸಿರುವುದಂತೂ ಸತ್ಯ. ದೇವೇಗೌಡರು ಏಕಾಂಗಿಯಾಗಿದ್ದಾರೆಯೇ ಎನ್ನುವ ಪ್ರಶ್ನೆ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ ದಳಪತಿಗಳ ಉತ್ತರ ನೀಡಬೇಕಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago