Featured

BREAKING – ನನ್ನ ಸಾವಿಗೆ ಕೆ.ಎಸ್.ಈಶ್ವರಪ್ಪ ಕಾರಣ ; ಬೆಳಗಾವಿ ಗುತ್ತಿಗೆದಾರ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣು – Vishwanews24

ಸಚಿವ ಈಶ್ವರಪ್ಪ ವಿರುದ್ಧ 40% ಕಮಿಷನ್‌ ಆರೋಪ ಮಾಡಿದ್ದ ಸಂತೋಷ್‌ ಪಾಟೀಲ್‌

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಸಂತೋಷ್ ಪಾಟೀಲ್

‘ನನ್ನ ಸಾವಿಗೆ ಸಚಿವ ಈಶ್ವರಪ್ಪನೇ ಕಾರಣ’ ಎಂದು ಡೆತ್‌ ಮೆಸೇಜ್‌ ಕಳುಹಿಸಿ ಸಾವು

ಉಡುಪಿ : ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇಕಡಾ 40 ಪರ್ಸೆಂಟೇಜ್ ಆರೋಪ ಮಾಡಿದ್ದ ಬೆಳಗಾವಿ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಾಧ್ಯಮದ ಪ್ರತಿನಿಧಿಗಳಿಗೆ ವಾಟ್ಸಪ್ ಸಂದೇಶ ರವಾನಿಸಿ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತರಾಗಿದ್ದ ಸಂತೋಷ್ ಪಾಟೀಲ್ ಮಾಧ್ಯಮ ಪತ್ರಿನಿಧಿಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಡರಾತ್ರಿ ವಾಟ್ಸಪ್ ಮೆಸೇಜ್ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮಪ್ರತಿನಿಧಿಗಳು ಬೆಳಗಾವಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರಿಗಾಗಿ ಹುಡುಕಾಟ ನಡೆಸಿದ ಪೊಲೀಸರಿಗೆ ಉಡುಪಿಯ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಂತೋಷ್ ಪಾಟೀಲ್ ಪತ್ತೆಯಾಗಿದ್ದಾರೆ.

ಮೊಬೈಲ್‌ನಲ್ಲಿ ವಾಟ್ಸಾಪ್ ಸಂದೇಶ ಕಳುಹಿಸಿದ್ದ ಸಂತೋಷ್ ಪಾಟೀಲ್ ನನ್ನ ಸಾವಿಗೆ ಕೆ.ಎಸ್.ಈಶ್ವರಪ್ಪ ಕಾರಣ ಎಂದು ಉಲ್ಲೇಖಿಸಿದ್ದರು. ಈಶ್ವರಪ್ಪ ಅವರಿಗೆ ಶಿಕ್ಷೆಯಾಗಬೇಕು. ನನ್ನೆಲ್ಲಾ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ಬಿ.ಎಸ್.ಯಡಿಯೂರಪ್ಪ ಸಹಾಯ ಮಾಡಬೇಕೆಂದು ಪತ್ರದಲ್ಲಿ ತಿಳಿಸಿದ್ದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

13 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

13 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago