ಬೆಂಗಳೂರು: ಮಂಡ್ಯದಲ್ಲಿ ನನ್ನ ಸೋಲಿಗೆ ನಾನೇ ಕಾರಣ ಎಂದು ಜೆಡಿಎಸ್ ಪರಾಭವ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದಾರೆ.
ಮಂಡ್ಯ ರಾಜಕರಣದ ಬಗ್ಗೆ ಮಾತನಾಡಿರುವ ಅವರು ನೂತನ ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ತಮ್ಮ ಸೋಲಿನ ಬಗ್ಗೆ ಮಾತನಾಡಿದ ಅವರು ನನ್ನ ಸೋಲಿಗೆ ನಾನು ಹೊಣೆ. ಯಾವುದೇ ಶಾಸಕರು, ಎಂಎಲ್ಸಿ, ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖ್ಯಸ್ಥ ದೇವೇಗೌಡರು ಯಾರು ಹೊಣೆಯಲ್ಲ ಎಂದು ತಮ್ಮ ಸೋಲನ್ನು ಪರಾಮರ್ಶಿಸಿಕೊಂಡಿದ್ದಾರೆ.
ಮಂಡ್ಯ ಜನತೆ ನಿಖಿಲ್ ಕುಮಾರಸ್ವಾಮಿಯನ್ನು ತಿರಸ್ಕರಿಸಿದ್ದಾರೆ. ಕಾರ್ಯಕರ್ತರ ನಿರೀಕ್ಷೆಯನ್ನು ಹುಸಿ ಮಾಡಿರುವುದಕ್ಕೆ ಅವರಿಗೆ ಕ್ಷಮೆ ಕೋರುತ್ತೇನೆ. ಮುಂದಿನ ದಿನಗಳಲ್ಲಿ ಮಂಡ್ಯ ಜನರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ರಾಜ್ಯದ್ಯಾಂತ ಪ್ರವಾಸ ಕೈಗೊಂಡು ಜನರ ಕಷ್ಟ-ಸುಖಗಳನ್ನು ಅರಿಯುವ ಪ್ರಯತ್ನ ಮಾಡುತ್ತೇನೆ. ಈ ಬಗ್ಗೆ ಶೀಘ್ರದಲ್ಲಿ ಸುದ್ದಿಗೋಷ್ಠಿ ನಡಸಿ ಮುಂದಿನ ಯೋಜನೆಯಗಳ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ನಿಖಿಲ್ ತಮ್ಮ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ರೆಬಲ್ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್ ಅವರ ಅಮರ್ ಚಿತ್ರ ಮೇ 31 ರಂದು ಬಿಡುಗಡೆಯಾಗಲಿದ್ದು, ನಿಖಿಲ್ ಅವರಿಗೆ ಶುಭಾಶಯ ಕೋರಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…