Featured

ನನ್ನ ಸೋಲಿಗೆ ನೂರಕ್ಕೆ ನೂರರಷ್ಟು ಮೈತ್ರಿ ಕಾರಣ : ವೀರಪ್ಪ ಮೊಯಿಲಿ -Vishwanews24

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳದೆ ಇದ್ದಿದ್ದರೆ 15 ರಿಂದ 16 ಸ್ಥಾನಗಳನ್ನು ಗೆಲುವು ಸಾಧಿಸುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹೇಳಿದ್ದಾರೆ.

ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈತ್ರಿ ಸರ್ಕಾರ ಜನರ ಭಾವನೆಗಳಿಗೆ ಸರಿಯಾಗಿ ಸ್ಪಂಧಿಸಿಲ್ಲ ಎಂದರು.

ನಾನು ಸೋತರೂ ಚಿಕ್ಕಬಳ್ಳಾಪುರದ ಜನರ ಮೇಲೆ ಪ್ರೀತಿ ವಿಶ್ವಾಸ ಮುಂದುವರಿಸುತ್ತೇನೆ. ಮುಂದೆ ಚುನಾವಣೆಗೆ ನಿಲ್ಲುತ್ತೇನೋ ಗೊತ್ತಿಲ್ಲ ಆದರೂ ಕ್ಷೇತ್ರದ ಜನರೊಂದಿಗೆ ಇರುತ್ತೇನೆ ಎಂದರು.

ಚುನಾವಣೆಯಲ್ಲಿ ನಮ್ಮವರಿಂದಲೂ ಮೋಸ ಆಯಿತು. ಅಧಿಕಾರ ಪಡೆಯುವ ಆಸೆಯಿಂದ ಮೋಸ ಮಾಡಿದ್ದಾರೆ. ಒಂದು ವೇಳೆ ಈ ಬಾರಿ ರಾಜ್ಯದಲ್ಲಿ ಮೈತ್ರಿ ಇಲ್ಲದೆ ಇದ್ದಿದ್ದರೆ 15 ರಿಂದ 16 ಸ್ಥಾನ ಖಂಡಿತಾ ಗೆಲ್ಲುತ್ತಿದ್ದೆವು. ಚಿಕ್ಕಬಳ್ಳಾಪುರದಲ್ಲಿ ನನ್ನ ಸೋಲಿಗೆ ನೂರಕ್ಕೆ ನೂರರಷ್ಟು ಮೈತ್ರಿಯೇ ಕಾರಣ ಎಂದು ಹೇಳಿದರು.

ಮಾಜಿ ಪ್ರಧಾನ ಮಂತ್ರಿ ಎಚ್​.ಡಿ. ದೇವೇಗೌಡರು ಇಂದು ಒಂದು ಹೇಳಿಕೆ ಕೊಡುತ್ತಾರೆ. ನಾಳೆ ಅದಕ್ಕೆ ವ್ಯತಿರಿಕ್ತವಾದ ಹೇಳಿಕೆ ಕೊಡುತ್ತಾರೆ. ಆದರೆ, ನಾನು ದೇವೇಗೌಡರ ರೀತಿ ಹೇಳಿಕೆ ಕೊಡುವುದಿಲ್ಲ. ನಾನು ಕೊಟ್ಟ ಹೇಳಿಕೆಯನ್ನು ವಾಪಸ್​ ಪಡೆಯುವುದಿಲ್ಲ. ದೇವೇಗೌಡರ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನಲ್ಲ ಎಂದು ಮೊಯ್ಲಿ ಹೇಳಿದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

5 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

6 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

6 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago