Featured

ನನ್ನ ಸ್ವಂತ ಇಚ್ಛೆಯಿಂದ ಅಬುಧಾಬಿಗೆ ಹೋಗಿದ್ದೇನೆ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದೇನೆ : ಕೇರಳದ ಯುವತಿ -Vishwanews24

ದುಬೈ: ‘ನನ್ನ ಸ್ವಂತ ಇಚ್ಛೆಯಿಂದ ಅಬುಧಾಬಿಗೆ ಹೋಗಿದ್ದೇನೆ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದೇನೆ’ ಎಂದು ಕೇರಳದ 19 ವರ್ಷದ ಕ್ರೈಸ್ತ ಹುಡುಗಿ ಸಿಯಾನಿ ಬೆನ್ನಿ ಸ್ಪಷ್ಟಪಡಿಸಿದ್ದಾರೆ.

ದೆಹಲಿಯಲ್ಲಿ ವಾಸವಾಗಿರುವ ಸಿಯಾನಿ ಬೆನ್ನಿಯ ಪೋಷಕರು ಮೂಲತಃ ಕೇರಳದ ಕೋಝಿಕೋಡ್ ನವರಾಗಿದ್ದು ಮಗಳು ಕಣ್ಮರೆಯ ಬೆನ್ನಲ್ಲೇ, ಸಿಯಾನಿ ಬೆನ್ನಿಯ ಪೋಷಕರು ನವದೆಹಲಿಯ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಮಾತ್ರವಲ್ಲದೇ ಆಕೆಯ ಕಾಲೇಜು ಸಹಪಾಠಿಗಳು, ” ವಿಶ್ವದಾದ್ಯಂತ ಹಾನಿ ಉಂಟುಮಾಡುವ ಶಕ್ತಿಯೊಂದು ಭಾರತೀಯ ಪ್ರಜೆಯನ್ನು ಅಪಹರಿಸಿದೆ ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಸಿಯಾನಿ ಬೆನ್ನಿ ಕಿಡ್ನಾಪ್ ಮಾಡಿ ಭಯೋತ್ಪಾದಕ ತಂಡದಲ್ಲಿ ಸೇರಲು ಒತ್ತಾಯಿಸಲಾಗಿದೆ ಎಂದು ವರದಿ ಪ್ರಸಾರವಾಗಿತ್ತು.

ಈ ಎಲ್ಲಾ ಬೆಳವಣಿಗೆಯ ಬಳಿಕ ಭಾನುವಾರ ಗಲ್ಫ್ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿರುವ ಸಿಯಾನಿ ಬೆನ್ನಿ, “ಇದು ನಿಜವಲ್ಲ. ನಾನು ನನ್ನ ಸ್ವಇಚ್ಚೆಯಿಂದ ಅಬುಧಾಬಿಗೆ ಬಂದಿದ್ದೇನೆ. ನನ್ನ ಮೇಲೆ ಯಾವುದೇ ಬಾಹ್ಯ ಒತ್ತಡವಿಲ್ಲ, ನಾನು ಭಾರತದ ವಯಸ್ಕ ಪ್ರಜೆಯಾಗಿದ್ದು, ನನ್ನ ಸ್ವಂತ ನಿರ್ಧಾರ ತೆಗೆದುಕೊಳ್ಳಬಹುದಾಗಿದೆ” ಎಂದು ಹೇಳಿದ್ದಾರೆ.

ನವದೆಹಲಿಯ ಮೇರಿ ಆಂಡ್ ಜೀಸಸ್ ಕಾಲೇಜಿನಲ್ಲಿ ಸಿಯಾನಿ ಅಂತಿಮ ಪದವಿ ವಿದ್ಯಾರ್ಥಿನಿಯಾಗಿದ್ದು, ನಾಪತ್ತೆಯಾಗುವ ಸೆಪ್ಟೆಂಬರ್ 18 ರಂದು ಬೆಳಿಗ್ಗೆ 11 ಗಂಟೆಯವರೆಗೆ ತರಗತಿಗೆ ಹಾಜರಾಗಿದ್ದರು. ಆದರೆ ಆ ಬಳಿಕ ಅದೇ ದಿನ ಮಧ್ಯಾಹ್ನ, 2.45ರ ವೇಳೆಗೆ  ಗೋ-ಏರ್ ವಿಮಾನವನ್ನೇರಿ ಅಬುಧಾಬಿಗೆ ಪ್ರಯಾಣಿಸಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

9 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago