ಥಿಂಪು,: ಎರಡು ದಿನಗಳ ಭೇಟಿಗಾಗಿ ಭೂತಾನ್ ತೆರಳಿದ ನರೇಂದ್ರ ಮೋದಿಯವರಿಗೆ ಅಲ್ಲಿ ಭವ್ಯ ಸ್ವಾಗತದಿಂದ ಬರ ಮಾಡಿಕೊಂಡಿದ್ದಾರೆ. ಭೂತಾನ್ ಪ್ರಧಾನಿ ತ್ಶೆರಿಂಗ್ ಟೊಬ್ಗೇ ಅವರು ಮೋದಿಯವರನ್ನು ಆಲಿಂಗಿಸಿ ನನ್ನ ಹಿರಿಯ ಸಹೋದರ ನಿಮಗೆ ಸ್ವಾಗತ ಎಂದು ಹೇಳಿದ್ದಾರೆ.
ಮಾರ್ಚ್ 21 ಹಾಗೂ 22 ರಂದು ಪ್ರಧಾನಿ ಮೋದಿಯವರ ಭೂತಾನ್ ಭೇಟಿ ನೀಡಬೇಕಿತ್ತು. ಆದರೆ ಪ್ರತಿಕೂಲ ಹವಾಮಾನದಿಂದಾಗಿ ಪ್ರಧಾನಿ ಮೋದಿಯವರ ಈ ಭೇಟಿಯನ್ನು ಮುಂದೂಡಲಾಯಿತು. ಪ್ರಧಾನಿ ಮೋದಿ ಇಂದು ಭೂತಾನ್‌ಗೆ ತೆರಳಿದ್ದಾರೆ.
ಇಂದು ಭೂತಾನ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನರೇಂದ್ರ ಮೋದಿಯವರಿಗೆ ಪ್ರಧಾನಿ ತ್ಶೆರಿಂಗ್ ತೊಬ್ಗೇಅವರು ಭವ್ಯ ಸ್ವಾಗತ ಕೋರಿದರು. ಜೊತೆಗೆ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರಿಗೆ ಗೌರವ ರಕ್ಷೆ ನೀಡಲಾಯಿತು.ರಸ್ತೆಬದಿಯಲ್ಲಿ ಜನ ನಿಂತು ಪ್ರಧಾನಿ ಮೋದಿಯವರನ್ನು ವಿಶೇಷವಾಗಿ ಸ್ವಾಗತಿಸಿದರು. ಪ್ರಧಾನಿ ಮೋದಿ ನಮ್ಮ ದೇಶಕ್ಕೆ ಬಂದಿದ್ದಾರೆ, ನಮಗೆ ತುಂಬಾ ಸಂತೋಷವಾಗಿದೆ ಎಂದು ಮಗುವೊಂದು ಹೇಳಿದೆ.
ಪ್ರಧಾನಿ ಮೋದಿಯವರು ಭೂತಾನ್‌ಗೆ ಆಗಮಿಸಿದ ನಂತರ, ಪ್ರಧಾನಿ ತ್ಶೆರಿಂಗ್ ತೊಬ್ಗೇ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ‘ನನ್ನ ಹಿರಿಯ ಸಹೋದರ, ಭೂತಾನ್‌ಗೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…