Featured

ನನ್ನ ಹೆಲಿಕಾಪ್ಟರ್‌ನ್ನು ನಿಲ್ಲಿಸಿ ಮೋದಿಯವರ ವಿಮಾನಕ್ಕೆ ಆದ್ಯತೆ ನೀಡಿದರು : ಮಲ್ಲಿಕಾರ್ಜುನ ಖರ್ಗೆ ಕಿಡಿ – vishwanews24

ನನ್ನ ಹೆಲಿಕಾಪ್ಟರ್‌ನ್ನು ನಿಲ್ಲಿಸಿ ಮೋದಿಯವರ ವಿಮಾನಕ್ಕೆ ಆದ್ಯತೆ ನೀಡಿದರು ..

ಇದೇ ಬಿಜೆಪಿ ಸರ್ಕಾರದ ನಿಜ ಸ್ವರೂಪ ಅವರು ಸದಾ ನಮ್ಮ ದಾರಿಗೆ ಅಡ್ಡಬರುತ್ತಾರೆ : ಮಲ್ಲಿಕಾರ್ಜುನ  ಖರ್ಗೆ ಅಸಮಾಧಾನ

ಪಟನಾ: ಬಿಹಾರ ಚುನಾವಣಾ ಪ್ರಚಾರದ ಮಧ್ಯೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ರೋಹ್ತಾಸ್ ಜಿಲ್ಲೆಯಲ್ಲಿ ನಡೆದ ಚುನಾವಣಾ ರ‍್ಯಾಲಿಗೆ ನಿಗದಿತ ಸಮಯಕ್ಕಿಂತ ಒಂದು ಗಂಟೆ 30 ನಿಮಿಷ ತಡವಾಗಿ ಆಗಮಿಸಿದರು. ಈ ತಡವಾಗುವಿಕೆಗೆ ಕಾರಣ ವಿವರಿಸುತ್ತಾ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನಕ್ಕೆ ಆದ್ಯತೆ ನೀಡಿದ ಕಾರಣ ನಾನು ಹೆಲಿಕಾಪ್ಟರ್‌ನಲ್ಲಿಯೇ ಕಾದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಸಭೆಯಲ್ಲಿ ಮಾತನಾಡಿದ ಖರ್ಗೆ “ನಾನು ಸಮಯಕ್ಕೆ ಸರಿಯಾಗಿ ಹೊರಟಿದ್ದೆ. ಆದರೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗಳು, ಪ್ರಧಾನಿಯವರ ವಿಮಾನ ಹೊರಡುವವರೆಗೆ ಕಾಯಿರಿ ಎಂದು ಹೇಳಿದರು. ಅದರ ಪರಿಣಾಮವಾಗಿ ನಾನು ಹೆಲಿಕಾಪ್ಟರ್‌ನಲ್ಲೇ ಸುಮಾರು 1.5 ಗಂಟೆ ಕಾಲ ಕುಳಿತೇ ಇರಬೇಕಾಯಿತು. ಇದೇ ಬಿಜೆಪಿ ಸರ್ಕಾರದ ನಿಜ ಸ್ವರೂಪ ಅವರು ಸದಾ ನಮ್ಮ ದಾರಿಗೆ ಅಡ್ಡಬರುತ್ತಾರೆ,” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಖರ್ಗೆ ತಮ್ಮ ಭಾಷಣದಲ್ಲಿ ಪ್ರಧಾನಿಯವರ ವಿದೇಶ ಪ್ರವಾಸಗಳನ್ನೂ ಟೀಕಿಸಿದರು. “ಮೋದಿಯವರು ತಮ್ಮ ಹೆಚ್ಚಿನ ಸಮಯವನ್ನು ವಿದೇಶಗಳಲ್ಲಿ ಕಳೆಯುತ್ತಾರೆ. ದೇಶದ ಚುನಾವಣೆಗಳು ಬಂದಾಗ ಮಾತ್ರ ಅವರು ಇಲ್ಲಿ ಕಾಣಿಸಿಕೊಳ್ಳುತ್ತಾರೆ. ಈಗ ಪಂಚಾಯತ್ ಮತ್ತು ಪುರಸಭೆ ಚುನಾವಣೆಗಳಿಗೂ ಪ್ರಚಾರ ಮಾಡಲು ಬರುವಂತಾಗಿದೆ,” ಎಂದು ವ್ಯಂಗ್ಯವಾಡಿದರು. ಬಿಹಾರದಲ್ಲಿ ನಡೆಯುತ್ತಿರುವ ಪ್ರಚಾರಯಾತ್ರೆಯಲ್ಲಿ ಖರ್ಗೆ ಅವರು ಹಲವು ಸಭೆಗಳಲ್ಲಿ ಭಾಗವಹಿಸುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಬಲವನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದ್ದಾರೆ.

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

10 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

11 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

11 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

11 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

12 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

12 hours ago