ನವದೆಹಲಿ: ದೇಶದ ಕುತೂಹಲ ಕೆರಳಿಸಿರುವ ಲೋಕಸಭೆ ಚುನಾವಣೆಯು ಕೊನೆಯ ಹಂತಕ್ಕೆ ಬಂದಿದೆ. ಈಗಾಗಲೇ ಐದು ಹಂತದ ಮತದಾನ ಮುಕ್ತಾಯಗೊಂಡಿದ್ದು, ಇನ್ನೂ ಎರಡು ಹಂತದ ಮತದಾನ ಬಾಕಿ ಇದೆ. ಜೂನ್ 1ರಂದು ಚುನಾವಣೆ ಮುಗಿಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ಇದರ ಮಧ್ಯೆಯೇ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರು ರಾಜಕೀಯ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, “ನನ್ನ ಹೆಸರು, ನನ್ನ ಕೆಲಸದಿಂದ ರಾಜಕೀಯ ಪ್ರವೇಶಿಸುತ್ತೇನೆ. ಗಾಂಧಿ ಕುಟುಂಬದ ಹೆಸರು ಬಳಸಿ ರಾಜಕೀಯಕ್ಕೆ ಬರಲ್ಲ” ಎಂದಿದ್ದಾರೆ.
ಎಎನ್‌ಐ ಜತೆ ಮಾತನಾಡುವಾಗ, ನೀವು ರಾಜಕೀಯ ಪ್ರವೇಶಿಸಲು ಬಯಸುತ್ತೀರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು. “ನಾನು ದೇಶದ ಸೇವೆ ಮಾಡುತ್ತಿದ್ದೇನೆ. ನಾನು ರಾಜಕೀಯ ಪ್ರವೇಶಿಸುವುದಿದ್ದರೆ, ನನ್ನ ಸಮಾಜ ಸೇವೆ, ನನ್ನ ಕೆಲಸ ಹಾಗೂ ನನ್ನ ಹೆಸರು ಬಳಸಿ ಪ್ರವೇಶಿಸುತ್ತೇನೆ. ಗಾಂಧಿ ಕುಟುಂಬದ ಹೆಸರು ಬಳಸಿಕೊಂಡು ನಾನು ರಾಜಕೀಯ ಪ್ರವೇಶಿಸುವುದಿಲ್ಲ. ಹೀಗೆ ಹೇಳಿದ ಮಾತ್ರಕ್ಕೆ ನಾನು ಗಾಂಧಿ ಕುಟುಂಬದ ಸದಸ್ಯ ಅಲ್ಲ ಎಂಬ ಅರ್ಥವಲ್ಲ. ಆದರೆ, ನನ್ನ ಹೆಸರು ಬಳಸಿಯೇ ನಾನು ರಾಜಕೀಯ ಪ್ರವೇಶಿಸುತ್ತೇನೆ” ಎಂದು ಹೇಳಿದರು.
“ರಾಜಕೀಯದಲ್ಲಿ ಬದಲಾವಣೆಯಾಗಬೇಕಿದೆ. ನಾನು ರೈತರು, ಬಡವರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಹೌದು, ಸೋನಿಯಾ ಗಾಂಧಿ ಸೇರಿ ಗಾಂಧಿ ಕುಟುಂಬದ ಹೆಸರು ಬಳಸಿದರೆ, ಅವರಿಂದ ಸಲಹೆ ಪಡೆದರೆ ನನಗೆ ಅನುಕೂಲವಾಗಬಹುದು. ಆದರೆ, ನನ್ನ ಕೆಲಸದಿಂದ ನಾನು ರಾಜಕೀಯಕ್ಕೆ ಬರಲು ಇಷ್ಟಪಡುತ್ತೇನೆ. ಹಾಗಂತ, ರಾಜಕೀಯ ಪ್ರವೇಶಿಸಲು ನಾನು ಸಮಾಜ ಸೇವೆ ಮಾಡುತ್ತಿಲ್ಲ. ಸೇವೆಯು ನನಗೆ ಖುಷಿ ಕೊಡುವ ವಿಚಾರವಾಗಿದೆ” ಎಂದು ಸಂದರ್ಶನದ ವೇಳೆ ಹೇಳಿದರು.
ಇದೇ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ಕೂಡ ರಾಬರ್ಟ್ ವಾದ್ರಾ ವಾಗ್ದಾಳಿ ನಡೆಸಿದರು. “ಕಳೆದ 10 ವರ್ಷಗಳಿಂದ ದೇಶದ ರಾಜಕೀಯ ವ್ಯವಸ್ಥೆಯನ್ನು ಜನ ನೋಡಿದ್ದಾರೆ. ಅಭಿವೃದ್ಧಿ ಹೊರತುಪಡಿಸಿ, ಧರ್ಮದ ಆಧಾರದ ಮೇಲೆ ರಾಜಕೀಯ ನಡೆಯುತ್ತಿದೆ. ನಾನು ಉದ್ಯಮದಲ್ಲಿ ತೊಡಗಿಸಿಕೊಳ್ಳಲು ಬಿಡುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಇ.ಡಿ ದಾಳಿ ನಡೆಯುತ್ತದೆ. ಆದರೆ, ಇದೆಲ್ಲದರ ಮಧ್ಯೆ ನಾನು ಸೇವೆ ಮುಂದುವರಿಸಿದ್ದೇನೆ. ನಾನು ರಾಜಕೀಯಕ್ಕೆ ಬಂದ ತಕ್ಷಣ ಎಲ್ಲವೂ ಬದಲಾಗಲಿದೆ ಎಂದು ಹೇಳುವುದಿಲ್ಲ. ಸೇವೆಗಾಗಿ ನಾನು ರಾಜಕೀಯ ಪ್ರವೇಶಿಸಲು ಬಯಸುತ್ತೇನೆ” ಎಂದು ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…