Featured

ನನ್ನ ಹೆಸರು, ನನ್ನ ಕೆಲಸದಿಂದ ರಾಜಕೀಯ ಪ್ರವೇಶಿಸುತ್ತೇನೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ  -vishwanews24

ನನ್ನ ಹೆಸರು, ನನ್ನ ಕೆಲಸದಿಂದ ರಾಜಕೀಯ ಪ್ರವೇಶಿಸುತ್ತೇನೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ

ನವದೆಹಲಿ: ದೇಶದ ಕುತೂಹಲ ಕೆರಳಿಸಿರುವ ಲೋಕಸಭೆ ಚುನಾವಣೆಯು  ಕೊನೆಯ ಹಂತಕ್ಕೆ ಬಂದಿದೆ. ಈಗಾಗಲೇ ಐದು ಹಂತದ ಮತದಾನ ಮುಕ್ತಾಯಗೊಂಡಿದ್ದು, ಇನ್ನೂ ಎರಡು ಹಂತದ ಮತದಾನ ಬಾಕಿ ಇದೆ. ಜೂನ್‌ 1ರಂದು ಚುನಾವಣೆ ಮುಗಿಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಇದರ ಮಧ್ಯೆಯೇ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರ ಪತಿ ರಾಬರ್ಟ್‌ ವಾದ್ರಾ  ಅವರು ರಾಜಕೀಯ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, “ನನ್ನ ಹೆಸರು, ನನ್ನ ಕೆಲಸದಿಂದ ರಾಜಕೀಯ ಪ್ರವೇಶಿಸುತ್ತೇನೆ. ಗಾಂಧಿ ಕುಟುಂಬದ  ಹೆಸರು ಬಳಸಿ ರಾಜಕೀಯಕ್ಕೆ ಬರಲ್ಲ” ಎಂದಿದ್ದಾರೆ.

ಎಎನ್‌ಐ ಜತೆ ಮಾತನಾಡುವಾಗ, ನೀವು ರಾಜಕೀಯ ಪ್ರವೇಶಿಸಲು ಬಯಸುತ್ತೀರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು. “ನಾನು ದೇಶದ ಸೇವೆ ಮಾಡುತ್ತಿದ್ದೇನೆ. ನಾನು ರಾಜಕೀಯ ಪ್ರವೇಶಿಸುವುದಿದ್ದರೆ, ನನ್ನ ಸಮಾಜ ಸೇವೆ, ನನ್ನ ಕೆಲಸ ಹಾಗೂ ನನ್ನ ಹೆಸರು ಬಳಸಿ ಪ್ರವೇಶಿಸುತ್ತೇನೆ. ಗಾಂಧಿ ಕುಟುಂಬದ ಹೆಸರು ಬಳಸಿಕೊಂಡು ನಾನು ರಾಜಕೀಯ ಪ್ರವೇಶಿಸುವುದಿಲ್ಲ. ಹೀಗೆ ಹೇಳಿದ ಮಾತ್ರಕ್ಕೆ ನಾನು ಗಾಂಧಿ ಕುಟುಂಬದ ಸದಸ್ಯ ಅಲ್ಲ ಎಂಬ ಅರ್ಥವಲ್ಲ. ಆದರೆ, ನನ್ನ ಹೆಸರು ಬಳಸಿಯೇ ನಾನು ರಾಜಕೀಯ ಪ್ರವೇಶಿಸುತ್ತೇನೆ” ಎಂದು ಹೇಳಿದರು.

“ರಾಜಕೀಯದಲ್ಲಿ ಬದಲಾವಣೆಯಾಗಬೇಕಿದೆ. ನಾನು ರೈತರು, ಬಡವರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಹೌದು, ಸೋನಿಯಾ ಗಾಂಧಿ ಸೇರಿ ಗಾಂಧಿ ಕುಟುಂಬದ ಹೆಸರು ಬಳಸಿದರೆ, ಅವರಿಂದ ಸಲಹೆ ಪಡೆದರೆ ನನಗೆ ಅನುಕೂಲವಾಗಬಹುದು. ಆದರೆ, ನನ್ನ ಕೆಲಸದಿಂದ ನಾನು ರಾಜಕೀಯಕ್ಕೆ ಬರಲು ಇಷ್ಟಪಡುತ್ತೇನೆ. ಹಾಗಂತ, ರಾಜಕೀಯ ಪ್ರವೇಶಿಸಲು ನಾನು ಸಮಾಜ ಸೇವೆ ಮಾಡುತ್ತಿಲ್ಲ. ಸೇವೆಯು ನನಗೆ ಖುಷಿ ಕೊಡುವ ವಿಚಾರವಾಗಿದೆ” ಎಂದು ಸಂದರ್ಶನದ ವೇಳೆ ಹೇಳಿದರು.

ಇದೇ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ಕೂಡ ರಾಬರ್ಟ್‌ ವಾದ್ರಾ ವಾಗ್ದಾಳಿ ನಡೆಸಿದರು. “ಕಳೆದ 10 ವರ್ಷಗಳಿಂದ ದೇಶದ ರಾಜಕೀಯ ವ್ಯವಸ್ಥೆಯನ್ನು ಜನ ನೋಡಿದ್ದಾರೆ. ಅಭಿವೃದ್ಧಿ ಹೊರತುಪಡಿಸಿ, ಧರ್ಮದ ಆಧಾರದ ಮೇಲೆ ರಾಜಕೀಯ ನಡೆಯುತ್ತಿದೆ. ನಾನು ಉದ್ಯಮದಲ್ಲಿ ತೊಡಗಿಸಿಕೊಳ್ಳಲು ಬಿಡುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಇ.ಡಿ ದಾಳಿ ನಡೆಯುತ್ತದೆ. ಆದರೆ, ಇದೆಲ್ಲದರ ಮಧ್ಯೆ ನಾನು ಸೇವೆ ಮುಂದುವರಿಸಿದ್ದೇನೆ. ನಾನು ರಾಜಕೀಯಕ್ಕೆ ಬಂದ ತಕ್ಷಣ ಎಲ್ಲವೂ ಬದಲಾಗಲಿದೆ ಎಂದು ಹೇಳುವುದಿಲ್ಲ. ಸೇವೆಗಾಗಿ ನಾನು ರಾಜಕೀಯ ಪ್ರವೇಶಿಸಲು ಬಯಸುತ್ತೇನೆ” ಎಂದು ಹೇಳಿದರು.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

11 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago