Featured

ನನ್ನ ಹೆಸರು ಹೇಳದೇ ಇದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ : ಡಿಕೆಶಿ – Vishwanews24

ನನ್ನ ಹೆಸರು ಹೇಳದೇ ಇದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ : ಡಿಕೆಶಿ

ಚಿಕ್ಕಮಗಳೂರು: ನನ್ನ ಹೆಸರು ಹೇಳದೇ ಇದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌  ಮಾಜಿ ಸಿಎಂ ಹೆಚ್‌ಡಿಕೆ ತಿರುಗೇಟು ನೀಡಿದ್ದಾರೆ.

ರಾಜ್ಯವ್ಯಾಪಿ ಪೆನ್‌ಡ್ರೈವ್‌  ಹಂಚಿದ್ದು ಡಿಕೆ ಶಿವಕುಮಾರ್‌ ಮತ್ತು ತಂಡ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನನ್ನ ಮೇಲೆ ಆರೋಪ ಮಾಡದಿದ್ದರೆ ಮಾರ್ಕೆಟ್‌ನಲ್ಲಿ ಸುದ್ದಿ ಓಡಲ್ಲ. ನನ್ನ ಹೆಸರು ಇರದಿದ್ದರೆ ನೀವು ತೋರಿಸುವುದಿಲ್ಲ.ಕಥಾನಾಯಕ, ನಿರ್ಮಾಪಕ, ನಿರ್ದೇಶಕ ಎಲ್ಲಾ ಎಲ್ಲಾ ಇವರೇ ಎಂದು ಕಿಡಿಕಾರಿದರು.

ಪೆನ್ ಡ್ರೈವ್ ವಿಚಾರ ಎಲ್ಲವೂ ಕುಮಾರಸ್ವಾಮಿಗೆ ಗೊತ್ತಿದೆ. ಕುಮಾರಣ್ಣನಿಗೆ ನನ್ನ ರಾಜೀನಾಮೆ ಬೇಕಂತೆ. ಒಕ್ಕಲಿಗ ನಾಯಕರ ಪೈಪೋಟಿಯಂತೆ. ಅಧಿಕಾರಿಗಳನ್ನು, ರಾಜಕಾರಣಿಗಳನ್ನು ಹೆದರಿಸುವುದೇ ಇವರ ಕೆಲಸ. ಕುಮಾರಸ್ವಾಮಿ ಕಿಂಗ್‌ ಆಫ್‌ ಬ್ಲಾಕ್‌ಮೇಲ್‌. ಚರ್ಚೆ ಮಾಡಲು ಸದನ ಇದೆ. ಎಲ್ಲವನ್ನೂ ತಗೆದುಕೊಂಡು ಬರಲಿ ಚರ್ಚೆ ಮಾಡೋಣ ಎಂದರು.

ಅವರದ್ದೇ ಬೇರೆ ಫ್ಯಾಮಿಲಿ ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ. ಇವರು ಇವರು ಲಾಯರ್ರಾ? ಜಡ್ಜಾ? ಹೋಗಿ ವಾದ ಮಾಡಲಿ ಎಂದು ವಾಗ್ದಾಳಿ ನಡೆಸಿದರು.

ಚುನಾವಣೆ ಮುಗಿದ ಬಳಿಕ ಚಿಕ್ಕಮಗಳೂರು ಹೊರವಲಯದಲ್ಲಿರುವ ಸೆರಾಯ್‌ ರೆಸಾರ್ಟ್‌ಗೆ ಡಿಕೆ ಶಿವಕುಮಾರ್‌ ತಮ್ಮ ಕುಟುಂಬದ ಸದಸ್ಯರ ಜೊತೆ ಆಗಮಿಸಿದ್ದಾರೆ. ಇಂದು ಬೆಳಗ್ಗೆ ಚಿಕ್ಕಮಗಳೂರು ಶಾಸಕ ಎಚ್.ಡಿ. ತಮ್ಮಯ್ಯ ಹಾಗೂ ಮಾಜಿ ಪರಿಷತ್‌ ಸದಸ್ಯೆ ಗಾಯತ್ರಿ ಶಾಂತಗೌಡ ಮತ್ತು ಜಿಲ್ಲಾ ಘಟಕದ ಪ್ರಮುಖ ಮುಖಂಡರ ಜೊತೆ ಉಪಹಾರ ಸೇವಿಸುತ್ತಾ ಚರ್ಚೆ ನಡೆಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago