ಚಿಕ್ಕಮಗಳೂರು: ನನ್ನ ಹೆಸರು ಹೇಳದೇ ಇದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮಾಜಿ ಸಿಎಂ ಹೆಚ್ಡಿಕೆ ತಿರುಗೇಟು ನೀಡಿದ್ದಾರೆ.
ರಾಜ್ಯವ್ಯಾಪಿ ಪೆನ್ಡ್ರೈವ್ ಹಂಚಿದ್ದು ಡಿಕೆ ಶಿವಕುಮಾರ್ ಮತ್ತು ತಂಡ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನನ್ನ ಮೇಲೆ ಆರೋಪ ಮಾಡದಿದ್ದರೆ ಮಾರ್ಕೆಟ್ನಲ್ಲಿ ಸುದ್ದಿ ಓಡಲ್ಲ. ನನ್ನ ಹೆಸರು ಇರದಿದ್ದರೆ ನೀವು ತೋರಿಸುವುದಿಲ್ಲ.ಕಥಾನಾಯಕ, ನಿರ್ಮಾಪಕ, ನಿರ್ದೇಶಕ ಎಲ್ಲಾ ಎಲ್ಲಾ ಇವರೇ ಎಂದು ಕಿಡಿಕಾರಿದರು.
ಪೆನ್ ಡ್ರೈವ್ ವಿಚಾರ ಎಲ್ಲವೂ ಕುಮಾರಸ್ವಾಮಿಗೆ ಗೊತ್ತಿದೆ. ಕುಮಾರಣ್ಣನಿಗೆ ನನ್ನ ರಾಜೀನಾಮೆ ಬೇಕಂತೆ. ಒಕ್ಕಲಿಗ ನಾಯಕರ ಪೈಪೋಟಿಯಂತೆ. ಅಧಿಕಾರಿಗಳನ್ನು, ರಾಜಕಾರಣಿಗಳನ್ನು ಹೆದರಿಸುವುದೇ ಇವರ ಕೆಲಸ. ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ಮೇಲ್. ಚರ್ಚೆ ಮಾಡಲು ಸದನ ಇದೆ. ಎಲ್ಲವನ್ನೂ ತಗೆದುಕೊಂಡು ಬರಲಿ ಚರ್ಚೆ ಮಾಡೋಣ ಎಂದರು.
ಅವರದ್ದೇ ಬೇರೆ ಫ್ಯಾಮಿಲಿ ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ. ಇವರು ಇವರು ಲಾಯರ್ರಾ? ಜಡ್ಜಾ? ಹೋಗಿ ವಾದ ಮಾಡಲಿ ಎಂದು ವಾಗ್ದಾಳಿ ನಡೆಸಿದರು.
ಚುನಾವಣೆ ಮುಗಿದ ಬಳಿಕ ಚಿಕ್ಕಮಗಳೂರು ಹೊರವಲಯದಲ್ಲಿರುವ ಸೆರಾಯ್ ರೆಸಾರ್ಟ್ಗೆ ಡಿಕೆ ಶಿವಕುಮಾರ್ ತಮ್ಮ ಕುಟುಂಬದ ಸದಸ್ಯರ ಜೊತೆ ಆಗಮಿಸಿದ್ದಾರೆ. ಇಂದು ಬೆಳಗ್ಗೆ ಚಿಕ್ಕಮಗಳೂರು ಶಾಸಕ ಎಚ್.ಡಿ. ತಮ್ಮಯ್ಯ ಹಾಗೂ ಮಾಜಿ ಪರಿಷತ್ ಸದಸ್ಯೆ ಗಾಯತ್ರಿ ಶಾಂತಗೌಡ ಮತ್ತು ಜಿಲ್ಲಾ ಘಟಕದ ಪ್ರಮುಖ ಮುಖಂಡರ ಜೊತೆ ಉಪಹಾರ ಸೇವಿಸುತ್ತಾ ಚರ್ಚೆ ನಡೆಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…