ಬೆಂಗಳೂರು: ನನ್ನ ಹೇಳಿಕೆಯಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಬೆಂಗಳೂರು: ಟಿಪ್ಪು ಹೊಡೆದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಹೊಡೆಯಬೇಕು ಎಂಬ ಹೇಳಿಕೆಗೆ ಸಚಿವ ಅಶ್ವತ್ಥ ನಾರಾಯಣ ವಿಷಾದ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಈ ಹೇಳಿಕೆಯಿಂದ ಸಿದ್ದರಾಮಯ್ಯ ಅವರಿಗೆ ವೈಯಕ್ತಿಕವಾಗಿ ನೋವಾಗಿದ್ರೆ ವಿಷಾಧ ವ್ಯಕ್ತಪಡಿಸ್ತೇನೆ ಎಂದರು.
ಟಿಪ್ಪು ರೀತಿ ಸಿದ್ದರಾಮಯ್ಯ ಹತ್ಯೆ ಮಾಡಬೇಕು ಅನ್ನೋ ಬಗ್ಗೆ ಸ್ಪಷ್ಟನೆ ನೀಡಿದ ಅಶ್ವತ್ಥ್ ನಾರಾಯಣ್, ಮಂಡ್ಯದಲ್ಲಿ ಕಸಬಾ ಮಹಾಶಕ್ತಿ ಕೇಂದ್ರದ ಕಾರ್ಯರ್ತರ ಉದ್ದೇಶಿಸಿ ಮಾತನಾಡುವಾಗ ಮಾತನಾಡಿದೆ. ಟಿಪ್ಪು ಹೆಸರು ಉಲ್ಲೇಖ ಮಾಡಿದ್ದೆ.ಟಿಪ್ಪು ಜಯಂತಿಯನ್ನು ಕಾಂಗ್ರೆಸ್ ಮಾಡ್ತಿದೆ. ಅದನ್ನು ಖಂಡಿಸಬೇಕಿದೆ. ಈ ಬಗ್ಗೆ ಜನರಿಗೆ ನಾನು ಸ್ಪಷ್ಟವಾಗಿ ಹೇಳಿದ್ದೆ ಎಂದರು.
ಬರುವ ಚುನಾವಣೆಯಲ್ಲಿ ಜನರ ಬೆಂಬಲ ನಮ್ಮ ಪರವಾಗಿ ಪಡೆದುಕೊಳ್ಳಬೇಕು. ನಾವು ಪ್ರಜಾಪ್ರಭುತ್ವ ದಲ್ಲಿ ಇದ್ದೇವೆ, ಯುದ್ಧದ ಕಾಲದಲ್ಲಿ ಇಲ್ಲ. ಪ್ರಜಾಪ್ರಭುತ್ವದಲ್ಲಿ ನಾವು ಗೆಲ್ಲಬೇಕಿದೆ. ಆ ವಿಚಾರವಾಗಿ ಹೇಳಿದ್ದೇನೆ ಹೊರತು ಬೇರೆಯ ರೀತಿ ಅಲ್ಲ ಎಂದು ಸ್ಪಷ್ಟನೆ ನೀಡಿದರು.
ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ವಿರೋಧ ಮಾಡ್ತಿದ್ದೇನೆ ವಿನಹ ವೈಯಕ್ತಿಕವಾಗಿ ಅಲ್ಲ. ಗೆಲುವು ಸೋಲು ಚುನಾವಣೆಯಲ್ಲಿ ಇದೆ. ಓಲೈಕೆ ಮಾಡುವ ಪಕ್ಷವನ್ನು ಸೋಲಿಸಬೇಕು. ಬಿಜೆಪಿ ಗೆಲ್ಲಿಸಬೇಕು ಅನ್ನೋದಷ್ಟೇ ನನ್ನ ಮಾತಿನ ಉದ್ದೇಶವಾಗಿತ್ತು ಎಂದರು.
ಆದರೂ, ತನ್ನ ಹೇಳಿಕೆಯಿಂದ ಸಿದ್ದರಾಮಯ್ಯ ಅವರಿಗೆ ವಯಕ್ತಿಕ ವಾಗಿ ನೋವಾಗಿದ್ರೆ ವಿಷಾದ ವ್ಯಕ್ತಪಡಿಸ್ತೇನೆ. ಇವರ ಹಾಗೆ ಸಿಎಂಗೆ ನಾಯಿ, ಪ್ರಧಾನಿಗೆ ನರಹಂತಕ ಎಂದು ಸಂಬೋಧಿಸಿ ಜಾತಿ, ಧರ್ಮ ಆಧಾರಿತವಾಗಿ ಸಮಾಜ ಒಡೆಯುವ ಕೆಲಸ ಮಾಡಿಲ್ಲ. ಇವರ ಹಾಗೆ ವೈಯಕ್ತಿಕವಾಗಿ ವಿರೋಧ ಮಾಡಿಲ್ಲ. ಚುನಾವಣೆಯಲ್ಲಿ ಗೆಲ್ಲಬೇಕೇ ವಿನಹ ಮತ್ತೆ ಬೇರೇನೂ ಅಲ್ಲ ಎಂದರು.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…