Featured

ನಮಗೆ ಅಯೋಧ್ಯೆ ಬೇಡ, ರೈತರ ಸಾಲಮನ್ನಾ ಮಾಡಿ : ರೈತರಿಂದ ಬೃಹತ್ ಪ್ರತಿಭಟನೆ

ನವದೆಹಲಿ: ಸ್ವಾಮಿನಾಥನ್ ವರದಿ ಜಾರಿ, ಪ್ರಧಾನ ಮಂತ್ರಿ ರಾಷ್ಟ್ರೀಯ ಫಸಲ್‌ ಬಿಮಾ (ಬೆಳೆ ವಿಮೆ) ಯೋಜನೆಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ರಾಷ್ಟ್ರದ ವಿವಿಧೆಡೆಯಿಂದ ಬಂದಿರುವ ರೈತರು ಇಲ್ಲಿನ ರಾಮಲೀಲಾ ಮೈದಾನದಲ್ಲಿ ಎರಡನೇ ದಿನವಾದ ಶುಕ್ರವಾರವೂ ಪ್ರತಿಭಟನೆ ಮುಂದುವರೆಸಿದ್ದಾರೆ. ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ಸಾಲಮನ್ನಾ ಸೇರಿದಂತೆ ತಮ್ಮ ಹಲವು ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದ್ದಾರೆ. ತಲೆಬುರುಡೆ ಹಿಡಿದುಕೊಂಡು ಸರಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

ನಮಗೆ ಅಯೋಧ್ಯೆ ಬೇಡ ರೈತರ ಸಾಲ ಮನ್ನಾ ಮಾಡಿ ಎಂದು ರೈತರು ಘೋಷಣೆಗಳನ್ನು ಕೂಗುತ್ತ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ.

ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ, ಖರೀದಿ ಕೇಂದ್ರ ಸ್ಥಾಪನೆ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ, ಮಿನಾಥನ್ ವರದಿಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ದೇಶದ ವಿವಿಧ ಭಾಗಗಳಿಂದ ಸಾವಿರಾರು ರೈತರು ಆಗಮಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆಂಧ್ರಪ್ರದೇಶ, ಗುಜರಾತ್‌, ಮಧ್ಯಪ್ರದೇಶ, ತಮಿಳುನಾಡು, ಮಹಾರಾಷ್ಟ್ರ, ಕರ್ನಾಟಕ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ರಾಜ್ಯಗಳು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ದೇಶದ ವಿವಿಧ ಭಾಗಗಳಿಂದ ದೆಹಲಿಗೆ ಬಂದು ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಮ್‍ಲೀಲಾ ಮೈದಾನದ ಸುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

10 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

10 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

11 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

11 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

12 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

12 hours ago