ನವದೆಹಲಿ: ಸ್ವಾಮಿನಾಥನ್ ವರದಿ ಜಾರಿ, ಪ್ರಧಾನ ಮಂತ್ರಿ ರಾಷ್ಟ್ರೀಯ ಫಸಲ್ ಬಿಮಾ (ಬೆಳೆ ವಿಮೆ) ಯೋಜನೆಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ರಾಷ್ಟ್ರದ ವಿವಿಧೆಡೆಯಿಂದ ಬಂದಿರುವ ರೈತರು ಇಲ್ಲಿನ ರಾಮಲೀಲಾ ಮೈದಾನದಲ್ಲಿ ಎರಡನೇ ದಿನವಾದ ಶುಕ್ರವಾರವೂ ಪ್ರತಿಭಟನೆ ಮುಂದುವರೆಸಿದ್ದಾರೆ. ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ಸಾಲಮನ್ನಾ ಸೇರಿದಂತೆ ತಮ್ಮ ಹಲವು ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದ್ದಾರೆ. ತಲೆಬುರುಡೆ ಹಿಡಿದುಕೊಂಡು ಸರಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.
ನಮಗೆ ಅಯೋಧ್ಯೆ ಬೇಡ ರೈತರ ಸಾಲ ಮನ್ನಾ ಮಾಡಿ ಎಂದು ರೈತರು ಘೋಷಣೆಗಳನ್ನು ಕೂಗುತ್ತ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ.
ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ, ಖರೀದಿ ಕೇಂದ್ರ ಸ್ಥಾಪನೆ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ, ಮಿನಾಥನ್ ವರದಿಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ದೇಶದ ವಿವಿಧ ಭಾಗಗಳಿಂದ ಸಾವಿರಾರು ರೈತರು ಆಗಮಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆಂಧ್ರಪ್ರದೇಶ, ಗುಜರಾತ್, ಮಧ್ಯಪ್ರದೇಶ, ತಮಿಳುನಾಡು, ಮಹಾರಾಷ್ಟ್ರ, ಕರ್ನಾಟಕ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ರಾಜ್ಯಗಳು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ದೇಶದ ವಿವಿಧ ಭಾಗಗಳಿಂದ ದೆಹಲಿಗೆ ಬಂದು ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಮ್‍ಲೀಲಾ ಮೈದಾನದ ಸುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…