Featured

ನಮಾಜ್ ಮಾಡಲು ಮಸೀದಿಯೇ ಬೇಕಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ:: ಬಾಬರಿ ಮಸ್ಜಿದ್ ಮತ್ತು ರಾಮಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ 1994ರಲ್ಲಿ ಕೆಳಹಂತದ ನ್ಯಾಯಾಲಯವು ನೀಡಿದ್ದ ಆದೇಶವನ್ನು ಇಂದು ಸುಪ್ರೀಮ್ ಕೋರ್ಟ್ ಎತ್ತಿ ಹಿಡಿದಿದೆ, ಮುಸ್ಲಿಮ್ ಧರ್ಮಿಯರಿಗೆ ನಮಾಜ್ ಮಾಡಲು ಮಸೀದಿಯೇ ಆಗಬೇಕೆಂದೇನಿಲ್ಲ ಎಂಬ ಆದೇಶವನ್ನು ಸುಪ್ರೀಮ್ ಕೋರ್ಟ್ ಎತ್ತಿ ಹಿಡಿದಿದೆ. ಇನ್ನು ಈ ಪ್ರಕರಣವನ್ನು ವಿಸ್ತೃತ ನ್ಯಾಯಾಲಯ ಪೀಠಕ್ಕೆ ವರ್ಗಾಯಿಸುವ ಅಗತ್ಯ ಇಲ್ಲವೆಂದು ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠವು ಇಂದು ತೀರ್ಪು ನೀಡಿದೆ.

ನಮಾಜ್ ಮಾಡಲು ಮಸೀದಿಯೇ ಆಗಬೇಕೆಂದೇನಿಲ್ಲ ಎಂದು 1994ರ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿಡಿದೆ. ಜೊತೆಗೆ ಈ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಅಗತ್ಯವಿಲ್ಲ ಎಂದು ತೀರ್ಮಾನಿಸಿದೆ. ಅಕ್ಟೋಬರ್ 29ರಂದು ರಾಮ ಜನ್ಮಭೂಮಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯಲಿದೆ. ನ್ಯಾ. ದೀಪಕ್ ಮಿಶ್ರಾ ಹಾಗೂ ಜಸ್ಟೀಸ್ ಅಶೋಕ್ ಭೂಷಣ್ನ್ಯಾ ಅವರು ವಿಸ್ತೃತ ಪೀಠಕ್ಕೆ ಕೇಸ್ ವರ್ಗಾವಣೆ ಬೇಡ ಎಂದರೆ,ನ್ಯಾ ಅಬ್ದುಲ್ ನಜೀರ್ ಅವರು ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಬಗ್ಗೆ ಒಲವು ತೋರಿದ್ದರು.

ಏನಿದು ಪ್ರಕರಣ?
ಇಸ್ಮಾಯಿಲ್ ಫರೂಕಿ ವರ್ಸಸ್ ಭಾರತ ಸರಕಾರದ ನಡುವಿನ ಪ್ರಕರಣದ ವಿಚಾರಣೆ ವೇಳೆ 1994ರಲ್ಲಿ ಸುಪ್ರೀಂ ಕೋರ್ಟ್, ನಮಾಜ್ ಎಲ್ಲಿ ಬೇಕಾದರೂ ಸಲ್ಲಿಸಬಹುದು. ಮಸೀದಿಯೇ ಆಗಬೇಕೆಂದಿಲ್ಲ. ಮಸೀದಿಯು ಇಸ್ಲಾಂನ ಅವಿಭಾಜ್ಯ ಅಂಗವಲ್ಲ. ಈ ಕಾರಣಕ್ಕೆ ಮಸೀದಿ ನಿರ್ಮಿಸಿರುವ ಜಾಗವನ್ನು ಸರ್ಕಾರ ವಶಪಡಿಸಿಕೊಳ್ಳಬಹುದು ಎಂದು ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು ಮೇಲ್ಮನವಿ ಸಲ್ಲಿಸಿದ್ದವು. ಅಷ್ಟೇ ಅಲ್ಲದೇ ಮಸೀದಿಯು ಇಸ್ಲಾಮ್ ನ ಅವಿಭಾಜ್ಯ ಅಂಗವಾಗಿಲ್ಲ ಎಂದಿದ್ದ ಇಸ್ಮಾಯಿಲ್ ಫಾರೂಕಿ ತೀರ್ಪನ್ನು ಪರಿಶೀಲನೆಗಾಗಿ ದೊಡ್ಡ ಸಂವಿಧಾನಿಕ ಪೀಠಕ್ಕೆ ಹಸ್ತಾಂತರಿಸಬೇಕು ಎಂದು ಅರ್ಜಿ ಸಲ್ಲಿಕೆಯಾಗಿತ್ತು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago