Featured

ನಮ್ಮಂತಹ ಹೋರಾಟಗಾರರು, ಪ್ರಾಮಾಣಿಕರು, ಹಿಂದುತ್ವ ವಾದಿಗಳಿಗೆ ಇಂದಿನ ರಾಜಕೀಯ ಬಿಜೆಪಿಯಲ್ಲಿ ಪ್ರವೇಶ ಇಲ್ಲ : ಪ್ರಮೋದ್‌ ಮುತಾಲಿಕ್‌ – Vishwanews24

ಎಲ್ಲ ಕಳ್ಳರು, ದರೋಡೆಕೋರರು, ಭ್ರಷ್ಟರಿಗೆ ಬಿಜೆಪಿ ಬಾಗಿಲು ತೆಗೆಯುತ್ತದೆ..

ನಾನು ರಾಜಕೀಯ ಬಾಗಿಲನ್ನು ಬಂದ್ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ಚುನಾವಣೆ ಇಲ್ಲ

ಹಿಂದೂ ಮಹಿಳೆಯರ ರಕ್ಷಣೆ ನಾವೇ ಮಾಡಬೇಕು..

ಮುಸ್ಲಿಂ ಕಿಡಿಗೇಡಿಗಳ ಪುಂಡಾಟಿಕೆ ಇನ್ನು ನಡೆಯೋದಿಲ್ಲ..

ದೇಶದ ಲೂಟಿ ತಡೆಯುವ ಶಕ್ತಿ ಪ್ರಧಾನಿ ಮೋದಿ ಹಾಗೂ ಯೋಗಿ ಆದಿತ್ಯನಾಥ್‌ ಅವರಿಗೆ ಬರಲಿ ಎಂದು ಪ್ರಾರ್ಥಿಸುತ್ತೇನೆ

ವಿಜಯಪುರ: ನಮ್ಮಂತಹ ಹೋರಾಟಗಾರರು, ಪ್ರಾಮಾಣಿಕರು, ಹಿಂದುತ್ವ ವಾದಿಗಳಿಗೆ ಇಂದಿನ ರಾಜಕೀಯ ಬಿಜೆಪಿಯಲ್ಲಿ ಪ್ರವೇಶ ಇಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದರು.

ವಿಜಯಪುರದಲ್ಲಿ ಮಾತನಾಡಿದ ಅವರು, ನಾನು ರಾಜಕೀಯ ಬಾಗಿಲನ್ನು ಬಂದ್ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ಚುನಾವಣೆ ಇಲ್ಲ. ನಮ್ಮಂತಹ ಹೋರಾಟಗಾರರಿಗೆ, ಪ್ರಾಮಾಣಿಕರಿಗೆ, ಹಿಂದುತ್ವ ವಾದಿಗಳಿಗೆ ಇಂದಿನ ರಾಜಕೀಯ ಬಿಜೆಪಿಯಲ್ಲಿ ಪ್ರವೇಶ ಇಲ್ಲ. ಎಲ್ಲ ಕಳ್ಳರು, ದರೋಡೆಕೋರರು, ಭ್ರಷ್ಟರಿಗೆ ಬಿಜೆಪಿ ಬಾಗಿಲು ತೆಗೆಯುತ್ತದೆ. ಹೀಗಾಗಿ ಚುನಾವಣೆಗೆ ಬಾಗಿಲನ್ನು ಮುಚ್ಚಿದ್ದೇನೆ ಎಂದು ತಿಳಿಸಿದರು.

ರಮೇಶ್‌ಕುಮಾರ್‌ ಹೇಳಿಕೆ ಕುರಿತು ಮಾತನಾಡಿ, ಅವರು ಏನು ಮಾಡಿದ್ದಾರೋ ಅದು ಸತ್ಯವಾಗಿ ಹೊರ ಬಂದಿದೆ. ಈ ವಿಚಾರ ಬೇರೆಯವರ ಬಾಯಲ್ಲಿ ಬರುತ್ತಿತ್ತು. ಆದರೆ ಈಗ ಯಾರು ಆಸ್ತಿ ಮಾಡಿದ್ದಾರೆ, ಅವರ ಬಾಯಿಂದಲೇ ಬಂತು. ಮೊಘಲರು, ಬ್ರಿಟಿಷರು, ನೆಹರೂ ಮನೆತನದಲ್ಲಿ ರಾಹುಲ್‌ ಗಾಂಧಿವರೆಗೆ ಲೂಟಿ ಮಾಡಿದರು. ಲೂಟಿ ಮಾಡೋದ್ರಲ್ಲೇ ನಮ್ಮ ದೇಶ ನಡೆಯುತ್ತಿದೆ. ಇದನ್ನು ತಡೆಯುವ ಶಕ್ತಿ ಪ್ರಧಾನಿ ಮೋದಿ ಹಾಗೂ ಯೋಗಿ ಆದಿತ್ಯನಾಥ್‌ ಅವರಿಗೆ ಬರಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಹಿಂದೂ ಮಹಿಳೆಯರ ರಕ್ಷಣೆ ನಾವೇ ಮಾಡಬೇಕು. ಅದು ನಮ್ಮ ಕರ್ತವ್ಯ. ಮುಸ್ಲಿಂ ಕಿಡಿಗೇಡಿಗಳ ಪುಂಡಾಟಿಕೆ ಇನ್ನು ನಡೆಯೋದಿಲ್ಲ. ಮುಸ್ಲಿಮರ ಗೂಂಡಾಗಿರಿ ನಡೆಯಲ್ಲ. ಹಿಂದೂ ಸಮಾಜ ಜಾಗೃತಿಯಾಗಿದೆ. ಮುಸ್ಲಿಮರಿಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಹುಷಾರಾಗಿರಿ, ನಿಮ್ಮ ಪಾಡಿಗೆ ನೀವಿರಿ ಎಂದು ಎಚ್ಚರಿಸಿದರು.

ಗಲಭೆ, ಕೊಲೆ, ಹಿಂದೂಗಳನ್ನು ಕೆಣಕೋದು ಇನ್ನು ನಡೆಯುವುದಿಲ್ಲ. ಇದಕ್ಕೆ ಹಿಂದೂ ಸಮಾಜ ಉತ್ತರ ಕೊಡುತ್ತೆ ಸಂವಿಧಾನದ ಆಧಾರದ ಮೇಲೆ ದೇಶ ನಡೆಯುತ್ತಿದೆ. ಡಾ.ಬಿ.ಆರ್.ಅಂಬೇಡ್ಕರರ ಸಂವಿಧಾನ ಇದೆ. ಏನೇ ಇದ್ದರೂ ಪ್ರಜಾಪ್ರಭುತ್ವ ಆಧಾರದ ಮೇಲೆ ಧರಣಿ ಮಾಡಿ, ದೂರು ಕೊಡಿ. ಅದನ್ನು ಬಿಟ್ಟು ಚಾಕು, ತಲವಾರ್‌ ಹಿಡಿದು ಬರೋದಕ್ಕೆ ಇದು ತಾಲಿಬಾನ್‌ ಅಲ್ಲ ಎಂದು ಸೂಚಿಸಿದರು.

ಬ್ರಹ್ಮಾವರ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಡಿ ವಿಚಾರಣೆ ಹಿನ್ನಲೆ ; ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

15 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

15 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

15 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

15 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago