ವಾಷಿಂಗ್ಟನ್: ‘ನಮ್ಮ ಸರ್ಕಾರದಲ್ಲಿ ಸಚಿವ ಸಂಪುಟ, ಶ್ವೇತಭವನದ ಕಚೇರಿ ಸೇರಿದಂತೆ ಆಡಳಿತದ ಎಲ್ಲ ವಿಭಾಗದಲ್ಲೂ ಹಿಂದೆಂದೂ ಕಾಣದ ವೈವಿಧ್ಯವನ್ನು ನೋಡಬಹುದು’ ಎಂದು ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬೈಡನ್ ಹೇಳಿದ್ದಾರೆ.
ಇತ್ತೀಚೆಗೆ ಆಫ್ರಿಕನ್– ಅಮೆರಿಕನ್ ಸಮುದಾಯದವರು ಸೇರಿದಂತೆ, ಕೆಲವು ಗುಂಪುಗಳು, ‘ಹೊಸ ಆಡಳಿತದಲ್ಲಿ ತಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿ’ ಎಂದು ಮನವಿ ಮಾಡಿದ ಹಿನ್ನೆಲೆಯಲ್ಲಿ, ಬೈಡನ್ ಅವರು ‘ನಮ್ಮದು ಎಲ್ಲರನ್ನೊಳಗೊಂಡ ವೈವಿಧ್ಯಮಯ ಆಡಳಿತವಾಗಲಿದೆ‘ ಎಂದು ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಲವರು ಹೊಸ ಸರ್ಕಾರದಲ್ಲಿ ತಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿ ಎಂದು ಒತ್ತಾಯಿಸುತ್ತಿದ್ದಾರೆ. ನಾನು ಹೇಳುವುದು ಇಷ್ಟೆ; ಒಮ್ಮೆ ಹೊಸ ಆಡಳಿತದ ಎಲ್ಲ ಚಟುವಟಿಕೆಗಳೂ ಪೂರ್ಣಗೊಳ್ಳಲಿ. ಆ ನಂತರ ನಮ್ಮ ಆಡಳಿತ ಎಷ್ಟು ವೈವಿಧ್ಯಮಯವಾಗಿದೆ ಎಂಬುದು ಗೊತ್ತಾಗುತ್ತದೆ‘ ಎಂದು ಹೇಳಿದ್ದಾರೆ.
‘ನಮ್ಮ ಆಡಳಿತದಲ್ಲಿ ಎಲ್ಲ ವರ್ಗದವರೂ ಇರುತ್ತಾರೆ. ಆದರೆ, ಯಾವ ಇಲಾಖೆಯಲ್ಲಿ ಏನು ಮಾಡುತ್ತೇನೆಂದು ಈಗ ನಿಖರವಾಗಿ ಹೇಳಲು ಆಗುವುದಿಲ್ಲ. ನಮ್ಮ ಆಡಳಿತದಲ್ಲಿ ಅಮೆರಿಕದಲ್ಲಿರುವ ಲಿಂಗ, ವರ್ಣ, ಸಮುದಾಯ ಆಧಾರಿತವಾಗಿ ಎಲ್ಲರಿಗೂ ಪ್ರಾತಿನಿಧ್ಯ ಸಿಗಲಿದೆ ಎಂದು ಭರವಸೆ ನೀಡುತ್ತೇನೆ‘ ಎಂದು ಜೋ ಬೈಡನ್ ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…