ಬೆಂಗಳೂರು : “ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದೇವೆ. ನಮ್ಮದು ಶಾಂತಿಪ್ರಿಯ ರಾಜ್ಯ. ಇಲ್ಲಿ ದುಷ್ಕೃತ್ಯಕ್ಕೆ ಅವಕಾಶವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಅವರು, “ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಸ್ಟಂಟ್ ಮಾಡುತ್ತಿದೆ. ಬಾಕಿ ಪ್ರಕರಣಗಳ ವಿಲೇವಾರಿಗೆ ಸರ್ಕಾರ ಮುಂದಾಗಿರುವುದಾಗಿ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ರಾಜ್ಯಕ್ಕೆ ಅಗೌರವ ತೋರಿದವರ, ಕಾನೂನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಬಿಜೆಪಿಯವರಿಗೆ 7 ತಿಂಗಳ ಕಾಲ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿರಲಿಲ್ಲ. ಈಗ ಚುನಾವಣೆ ಸಮೀಪಿಸುತ್ತಿದೆ. ಹೀಗಾಗಿ ತಾವು ರಾಜಕೀಯವಾಗಿ ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಹೀಗೆ ಮಾತನಾಡುತ್ತಿದ್ದಾರೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಹಾಗೂ ಜನ ಇದಕ್ಕೆ ಉತ್ತರ ನೀಡುತ್ತೇವೆ. ನಾವು ಅವರಂತೆ ಅಧಿಕಾರ ದುರ್ಬಳಕೆ ಮಾಡಿಕೊಂಡು, ಅನ್ಯ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿಲ್ಲ. ಬಿಜೆಪಿ ಸರ್ಕಾರ ಇದ್ದಾಗ ಹುಬ್ಬಳ್ಳಿ, ಬೆಂಗಳೂರಿನಲ್ಲಿ ಎಷ್ಟು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದೆ ಎಂಬುದನ್ನು ನೋಡಿ. ನಾವು ಇದುವರೆಗೂ ಆ ರೀತಿ ಮಾಡಿಲ್ಲ. ಮುಂದೆಯೂ ಮಾಡಲ್ಲ ಎಂದು ಹೇಳಿದರು.
ಪೊಲೀಸ್ ಠಾಣೆ ಮುತ್ತಿಗೆ ಹಾಕಲು ವಿರೋಧ ಪಕ್ಷದ ನಾಯಕರು ಹುಬ್ಬಳ್ಳಿಗೆ ತೆರಳಿರುವ ಬಗ್ಗೆ ಕೇಳಿದಾಗ, “ಅವರು ಹೋಗಿ ಕಟ್ಟಿ ಹಾಕಿಕೊಳ್ಳಲಿ. ಅವರ ಸರ್ಕಾರದಲ್ಲಿ ಏನೆಲ್ಲಾ ಮಾಡಿದ್ದರು ಎಂದು ನೋಡಿಕೊಳ್ಳಲಿ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಮವಸ್ತ್ರ ಬದಲು ಕೇಸರಿ ಬಟ್ಟೆ ಹಾಕಿಸಿದರು. ಅಂತಹ ಕೆಲಸ ನಾವು ಮಾಡಿಲ್ಲ” ಎಂದು ತಿರುಗೇಟು ನೀಡಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…