ಬೆಳಗಾವಿ: ನಾವು ಹಿಂದೂಗಳೇ , ಹುಟ್ಟಿದ್ದು ಹಿಂದೂವಾಗಿ ಸಾಯುವುದು ಹಿಂದೂವಾಗಿಯೇ. ಬಿಜೆಪಿಯವರದ್ದು ನಾಟಕ. ಒಳಗಿನಿಂದ ನಮ್ಮಲ್ಲಿ ಹಿಂದುತ್ವವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಿಂದುತ್ವದ ಜಪ ಮಾಡಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸಾವರ್ಕರ್ ಬಿಸಿ ಜೋರಾಗಿ ತಟ್ಟುವ ಸಾಧ್ಯತೆ ಹೆಚ್ಚಿದೆ. ಇಂದಿನಿಂದ 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಬೆಳಗಾವಿ ಸುವರ್ಣಸೌಧದಲ್ಲಿ ಮೊದಲ ದಿನದಿಂದಲೇ ಹಿಂದುತ್ವ ವಿಚಾರವೇ ಹೆಚ್ಚು ಪ್ರತಿಧ್ವನಿಸುವ ಮುನ್ಸೂಚನೆ ಸಿಕ್ಕಿದೆ.
ಸುವರ್ಣಸೌಧದ ಮುಂಭಾಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಸ್ಪೀಕರ್ ಗಾಂಧಿ ಹಾಗೂ ಅಂಬೇಡ್ಕರ್ ಸೇರಿದಂತೆ ಮಹನಿಯರ ಫೋಟೋ ಹಾಕ್ತೀವಿ ಅಂತ ಹೇಳಿದ್ದರು. ಆದರೆ ಇಲ್ಲಿಗೆ ಬಂದ ಮೇಲೆ ಮಾಧ್ಯಮ ಮೂಲಕ ಸಾವರ್ಕರ್ ಫೋಟೋ ಹಾಕೋದು ಗೊತ್ತಾಯಿತು. ಸಾವರ್ಕರ್‌ಗೂ ನಮ್ಮ ರಾಜ್ಯಕ್ಕೂ ಏನು ಸಂಬಂಧ? ಸಾವರ್ಕರ್ ವಿವಾದಾತ್ಮಕ ವ್ಯಕ್ತಿ ಅಂತ ಎಲ್ಲರಿಗೂ ಗೊತ್ತು. ಇದೀಗ ಬಿಜೆಪಿ ಅಧಿವೇಶನಕ್ಕೆ ಅಡ್ಡಿ ತರಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಫೋಟೋ ವಿಚಾರವಾಗಿ ನನಗೆ ಗೊತ್ತೆ ಇಲ್ಲಾ ಅಂತ ಮುಖ್ಯಮಂತ್ರಿಗಳು ಹೇಳಿದ್ರು. ಅವರು ಸುಳ್ಳಿನ ರಾಜ. ಮುಖ್ಯಮಂತ್ರಿಗಳಿಗೆ ಸುಳ್ಳಿನ ರಾಜ ಅಂತ ಕರೆಯಬೇಕಾಗುತ್ತೆ. ಸ್ವಾತಂತ್ರಕ್ಕೆ ಸಾವರ್ಕರ್ ಕೊಡುಗೆ ಇಲ್ಲ. ಅವರು ತಪ್ಪು ಒಪ್ಪಿಕೊಂಡು ಪತ್ರ ಬರೆದು ಕೊಟ್ಟಿದ್ದರು. ಅವರು ಬ್ರಿಟಿಷರ ಜೊತೆ ಕೈ ಜೋಡಿಸಿದ್ದರು. ಕಮೀಷನ್, ಮತದಾರರ ಪಟ್ಟಿ ಹಗರಣ ಯಾವುದೂ ಚರ್ಚೆ ಆಗಬಾರದು ಅಂತ ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…