Featured

ನಮ್ಮಿಂದ ಸರ್ಕಾರ ಬಂದರೂ, ನಮ್ ಜೊತೆ ನಿಲ್ಲಲಿಲ್ಲ. ಕಾನೂನಿನ ವಿಚಾರದಲ್ಲಿ ಯಾರೂ ಸಹಾಯ ಮಾಡಲಿಲ್ಲ : ಎಚ್.ವಿಶ್ವನಾಥ್ -Vishwanews24

ನಮ್ಮಿಂದ ಸರ್ಕಾರ ಬಂದರೂ, ನಮ್ ಜೊತೆ ನಿಲ್ಲಲಿಲ್ಲ. ಕಾನೂನಿನ ವಿಚಾರದಲ್ಲಿ ಯಾರೂ ಸಹಾಯ ಮಾಡಲಿಲ್ಲ : ಎಚ್.ವಿಶ್ವನಾಥ್ -Vishwanews24

ಬೆಂಗಳೂರು: ನಮ್ಮಿಂದಲೇ ಸರ್ಕಾರ ಬಂದರೂ ನಮ್ಮ ಜೊತೆ ನಿಲ್ಲಲಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಸಮಧಾನ ಹೊರ ಹಾಕಿದ್ದಾರೆ.

ಹೈ ಕೋರ್ಟ್ ತೀರ್ಪಿನ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮಿಂದ ಸರ್ಕಾರ ಬಂದರೂ, ನಮ್ ಜೊತೆ ನಿಲ್ಲಲಿಲ್ಲ. ಕಾನೂನಿನ ವಿಚಾರದಲ್ಲಿ ಯಾರೂ ಸಹಾಯ ಮಾಡಲಿಲ್ಲ. ವಿಧಾನ ಪರಿಷತ್ ಚುನಾವಣೆ ವೇಳೆ ಅಭ್ಯರ್ಥಿಗಳ ಪಟ್ಟಿಯಿಂದ ನನ್ನ ಹೆಸರು ತೆಗೆದರು. ನನ್ನ ಅನುಭವ ಬಳಸಿಕೊಳ್ಳಬಹುದಿತ್ತು. ಆದರೆ ಕಡೆಗಣಿಸಿದರು, ಎಲ್ಲವನ್ನೂ ನಾನು ಎದುರಿಸುತ್ತೇನೆ. ನನಗೂ ಪರಿಷತ್ ಚುನಾವಣೆಗೆ ಟಿಕೆಟ್ ನೀಡಿದ್ದರೆ ಮಂತ್ರಿ ಆಗುತ್ತಿದ್ದೆ ಎಂದು ತಿಳಿಸಿದರು.

ಪರಿಷತ್ ಚುನಾವಣೆ ವೇಳೆ ನನ್ನ ಹೆಸರು ಯಾಕೆ ತೆಗೆದರು ಅಂತ ಗೊತ್ತಿಲ್ಲ. ನನ್ನ ಬಗ್ಗೆ ಎಜಿಗೆ ಅನಾದರ ಯಾಕೆ, ಅಡ್ವೊಕೇಟ್ ಜನರಲ್ ನನ್ನ ಜೊತೆ ಮಾತಾಡಲಿಲ್ಲ. ಸರಿಯಾಗಿ ಕೆಲಸ ಮಾಡಲಿಲ್ಲ. ನಾಮನಿರ್ದೇಶನದ ಬಗ್ಗೆ ಅವರು ಸ್ಪಷ್ಟವಾಗಿ ಹೇಳಲಿಲ್ಲ ಎಂದು ಎಜಿ ಮೇಲೆ ಸಹ ವಿಶ್ವನಾಥ್ ಆರೋಪ ಮಾಡಿದ್ದಾರೆ. ಬಿಜೆಪಿ ಕೋರ್ ಕಮಿಟಿಗೆ ಜೂನ್ ನಲ್ಲಿ ಪರಿಷತ್ ಗೆ ನನ್ನ ಹೆಸರೂ ಸೇರಿಸಿ ನಾಲ್ವರ ಹೆಸರು ಕಳುಹಿಸಲಾಗಿತ್ತು. ಅಲ್ಲಿಂದ ಪಟ್ಟಿ ಬರುವಾಗ ನನ್ನ ಹೆಸರು ಇರಲಿಲ್ಲ. ದೆಹಲಿಯಲ್ಲಿ ನನ್ನ ಹೆಸರು ತೆಗೆಸಿದ್ದು ಯಾಕೆ ಎಂದು ಬಿಜೆಪಿ ನಾಯಕರಲ್ಲಿ ಕೇಳಿದೆ. ನಿಮ್ಮನ್ನು ನಾಮನಿರ್ದೇಶನ ಮಾಡುತ್ತೇವೆ ಎಂದರು.

ಇಂದು ಸಿಎಂ ಜೊತೆ ಮಾತನಾಡುತ್ತೇನೆ. ನನ್ನ ಬಗ್ಗೆ ಕಾಳಜಿ ತೋರಿ ಮಾತನಾಡಿದವರಿಗೆ ಧನ್ಯವಾದಗಳು. ನನಗೆ ತೀರ್ಪಿನ ಪ್ರತಿ ಸಿಕ್ಕ ಮೇಲೆ ವಕೀಲರ ಜೊತೆ ಚರ್ಚೆ ಮಾಡುತ್ತೇನೆ. ಬಳಿಕ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

7 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

9 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

10 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

10 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

10 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

10 hours ago