KPCC President, Dinesh Gundu Rao addressing press media at KPCC office, in Bengaluru on Wednesday 3rd April 2019 Pics: www.pics4news.com
ಮಂಗಳೂರು: ಮೂರು ತಿಂಗಳಲ್ಲಿ ಸರ್ಕಾರ ಬಿದ್ದು ಹೋಗುತ್ತೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಅದು ತಿರುಕನ ಕನಸು, ಜನ ಅವರನ್ನು ಮನೆಗೆ ಕಳುಹಿಸಿದ್ದಾರೆ. ನಮ್ಮ ಪಕ್ಷ ಸುಭದ್ರವಾಗಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಅವರ ಪಕ್ಷದಲ್ಲಿ ಏನು ಸರಿ ಇದೆ? ನಮ್ಮ ಬಟ್ಟಲಲ್ಲಿ ಸೊಳ್ಳೆ ಇದ್ರೆ ಅವರ ಬಟ್ಟಲಲ್ಲಿ ಹೆಗ್ಗಣ ಇದೆ. ಅವರನ್ನು ಅವರು ಉಳಿಸುವುದನ್ನು ನೋಡಿಕೊಳ್ಳಲಿ ಎಂದರು.
ಸುರ್ಜೆವಾಲ ಅವರು ರಾಜ್ಯದ ಎಲ್ಲಾ ಶಾಸಕರನ್ನು ಭೇಟಿಯಾಗಲಿದ್ದಾರೆ. ಅವರಲ್ಲಿರುವ ಅಭಿಪ್ರಾಯಗಳನ್ನು ಸಂಗ್ರಹಿಸಿ ನಂತರ ಮುಂದಿನ ಕ್ರಮ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ರಾಜಕೀಯದಲ್ಲಿ ಅತ್ಯಂತ ದೊಡ್ಡ ಪಕ್ಷ ಹಲವರ ಅಭಿಪ್ರಾಯಗಳು ಬೇರೆ ಬೇರೆಯಾಗಿರುತ್ತವೆ. ನಾನು ಅವರನ್ನು ಭೇಟಿಯಾಗುತ್ತೇನೆ, ನಮ್ಮ ಆಂತರಿಕ ಸಮಸ್ಯೆ ನಮ್ಮಲ್ಲೇ ಬಗೆಹರಿಸುತ್ತೇವೆ ಎಂದು ಹೇಳಿದರು.
ಮನೆಯ ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ ಆಗಿದ್ದರೆ ಅ ಬಗ್ಗೆ ಮಾಹಿತಿ ಕೊಡಲಿ. ಬಿ ಆರ್ ಪಾಟೀಲ್ ಅವರು ಹೇಳಿಕೆ ಕೊಟ್ಟಿದ್ದಾರೆ, ಸಿ ಎಂ ಅವರಲ್ಲೂ ಮಾತನಾಡಿದ್ದಾರೆ. ಇಡೀ ದೇಶದಲ್ಲಿಯೇ ಭ್ರಷ್ಟಾಚಾರ ಇದೆ. ಭ್ರಷ್ಟಾಚಾರ ಇಲ್ಲಾ ಅಂತ ಹೇಳಕ್ಕಾಗಲ್ಲ. ಇದನ್ನು ನಾವು ನಿರ್ಮೂಲನೆ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಮರಳು ಹಾಗೂ ಕೆಂಪು ಕಲ್ಲು ಕೊರತೆ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, ಅಕ್ರಮವಾಗಿ ನಡೆಯುತ್ತಿರುವ ಕೆಂಪು ಕಲ್ಲು ಹಾಗೂ ಮರಳು ಸಾಗಾಟ ಕಾನೂನು ಉಲ್ಲಂಘಿಸಿ ಮಾಡಲು ಸಾಧ್ಯವಿಲ್ಲ. ಕೆಡಿಪಿ ಸಭೆಯಲ್ಲಿ ಈ ಬಗ್ಗೆ ಚರ್ಚೆಯನ್ನು ಮಾಡುತ್ತೇವೆ. ಇಷ್ಟು ದಿನ ಯಾವ ರೀತಿಯಲ್ಲಿ ಇದನ್ನ ಮಾಡುತ್ತಿದ್ದರು? ಈ ಬಗ್ಗೆ ಹಿರಿಯ ಅಧಿಕಾರಿಗಳ ಬಗ್ಗೆ ಚರ್ಚಿಸಿ ಸಡಿಲ ಮಾಡುವ ಕ್ರಮವನ್ನು ಕೈಗೊಳ್ಳುವ ನಿರ್ಧಾರವನ್ನು ಮಾಡುತ್ತೇವೆ ಎಂದು ತಿಳಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…