Featured

ನಮ್ಮ ಆಂತರಿಕ ಸಮಸ್ಯೆ ನಮ್ಮಲ್ಲೇ ಬಗೆಹರಿಸುತ್ತೇವೆ : ದಿನೇಶ್ ಗುಂಡೂರಾವ್ – vishwanews24

ನಮ್ಮ ಪಕ್ಷ ಸುಭದ್ರವಾಗಿದೆ : ದಿನೇಶ್ ಗುಂಡೂರಾವ್

ಮಂಗಳೂರು: ಮೂರು ತಿಂಗಳಲ್ಲಿ ಸರ್ಕಾರ ಬಿದ್ದು ಹೋಗುತ್ತೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಅದು ತಿರುಕನ ಕನಸು, ಜನ‌ ಅವರನ್ನು ಮನೆಗೆ ಕಳುಹಿಸಿದ್ದಾರೆ. ನಮ್ಮ ಪಕ್ಷ ಸುಭದ್ರವಾಗಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಅವರ ಪಕ್ಷದಲ್ಲಿ ಏನು ಸರಿ ಇದೆ? ನಮ್ಮ ಬಟ್ಟಲಲ್ಲಿ ಸೊಳ್ಳೆ ಇದ್ರೆ ಅವರ ಬಟ್ಟಲಲ್ಲಿ ಹೆಗ್ಗಣ ಇದೆ. ಅವರನ್ನು ಅವರು ಉಳಿಸುವುದನ್ನು ನೋಡಿಕೊಳ್ಳಲಿ ಎಂದರು.

ಸುರ್ಜೆವಾಲ ಅವರು ರಾಜ್ಯದ ಎಲ್ಲಾ ಶಾಸಕರನ್ನು ಭೇಟಿಯಾಗಲಿದ್ದಾರೆ. ಅವರಲ್ಲಿರುವ ಅಭಿಪ್ರಾಯಗಳನ್ನು‌ ಸಂಗ್ರಹಿಸಿ ನಂತರ ಮುಂದಿನ‌ ಕ್ರಮ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ರಾಜಕೀಯದಲ್ಲಿ ಅತ್ಯಂತ ದೊಡ್ಡ ಪಕ್ಷ ಹಲವರ ಅಭಿಪ್ರಾಯಗಳು ಬೇರೆ ಬೇರೆಯಾಗಿರುತ್ತವೆ. ನಾನು ಅವರನ್ನು ಭೇಟಿಯಾಗುತ್ತೇನೆ, ನಮ್ಮ ಆಂತರಿಕ ಸಮಸ್ಯೆ ನಮ್ಮಲ್ಲೇ ಬಗೆಹರಿಸುತ್ತೇವೆ ಎಂದು ಹೇಳಿದರು.

ಮನೆಯ ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ ಆಗಿದ್ದರೆ ಅ ಬಗ್ಗೆ ಮಾಹಿತಿ ಕೊಡಲಿ. ಬಿ ಆರ್ ಪಾಟೀಲ್ ಅವರು ಹೇಳಿಕೆ ಕೊಟ್ಟಿದ್ದಾರೆ, ಸಿ ಎಂ ಅವರಲ್ಲೂ ಮಾತನಾಡಿದ್ದಾರೆ. ಇಡೀ ದೇಶದಲ್ಲಿಯೇ ಭ್ರಷ್ಟಾಚಾರ ಇದೆ. ಭ್ರಷ್ಟಾಚಾರ ಇಲ್ಲಾ ಅಂತ ಹೇಳಕ್ಕಾಗಲ್ಲ. ಇದನ್ನು ನಾವು ನಿರ್ಮೂಲನೆ ಮಾಡಬೇಕು ಎಂದರು.

ಜಿಲ್ಲೆಯಲ್ಲಿ ಮರಳು ಹಾಗೂ ಕೆಂಪು ಕಲ್ಲು ಕೊರತೆ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, ಅಕ್ರಮವಾಗಿ ನಡೆಯುತ್ತಿರುವ ಕೆಂಪು ಕಲ್ಲು ಹಾಗೂ ಮರಳು ಸಾಗಾಟ ಕಾನೂನು ಉಲ್ಲಂಘಿಸಿ ಮಾಡಲು ಸಾಧ್ಯವಿಲ್ಲ. ಕೆಡಿಪಿ ಸಭೆಯಲ್ಲಿ ಈ ಬಗ್ಗೆ ಚರ್ಚೆಯನ್ನು ಮಾಡುತ್ತೇವೆ. ಇಷ್ಟು ದಿನ ಯಾವ ರೀತಿಯಲ್ಲಿ ಇದನ್ನ ಮಾಡುತ್ತಿದ್ದರು? ಈ ಬಗ್ಗೆ ಹಿರಿಯ ಅಧಿಕಾರಿಗಳ ಬಗ್ಗೆ ಚರ್ಚಿಸಿ ಸಡಿಲ ಮಾಡುವ ಕ್ರಮವನ್ನು ಕೈಗೊಳ್ಳುವ ನಿರ್ಧಾರವನ್ನು ಮಾಡುತ್ತೇವೆ ಎಂದು ತಿಳಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago