ಬೆಂಗಳೂರು: ನಮ್ಮ ಆಡಳಿತ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣದ ಮತದಾರರಿಗೆ ಅನಂತ ಧನ್ಯವಾದಗಳು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಇಂದು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು ಎಂದಿದ್ದಾರೆ.
ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್ ಅಹ್ಮದ್ ಖಾನ್ ಪಠಾಣ್, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ. ಯೋಗೇಶ್ವರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ಅಂತ ಹೇಳಿದ್ದಾರೆ.
ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ ಅಂತ ತಿಳಿಸಿದ್ದಾರೆ.
ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…