Featured

ನಮ್ಮ ಆಡಳಿತ ಮೇಲೆ ವಿಶ್ವಾಸವಿಟ್ಟು ಬೆಂಬಲಿಸಿದ ಮತದಾರರಿಗೆ ಅನಂತ ಧನ್ಯವಾದಗಳು : ಮುಖ್ಯಮಂತ್ರಿ ಸಿದ್ಧರಾಮಯ್ಯ – vishwanews24

ನಮ್ಮ ಆಡಳಿತ ಮೇಲೆ ವಿಶ್ವಾಸವಿಟ್ಟು ಬೆಂಬಲಿಸಿದ ಮತದಾರರಿಗೆ ಅನಂತ ಧನ್ಯವಾದಗಳು : ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು: ನಮ್ಮ ಆಡಳಿತ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣದ ಮತದಾರರಿಗೆ ಅನಂತ ಧನ್ಯವಾದಗಳು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇಂದು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು ಎಂದಿದ್ದಾರೆ.

ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್‌ ಅಹ್ಮದ್‌ ಖಾನ್‌ ಪಠಾಣ್‌, ಅನ್ನಪೂರ್ಣ ತುಕಾರಾಮ್‌ ಹಾಗೂ ಸಿ.ಪಿ. ಯೋಗೇಶ್ವರ್‌ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ಅಂತ ಹೇಳಿದ್ದಾರೆ.

ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ ಅಂತ ತಿಳಿಸಿದ್ದಾರೆ.

ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

Vishwa News 24

Recent Posts

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

17 minutes ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

29 minutes ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

3 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

3 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

17 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

20 hours ago