Featured

ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ : ನಳಿನ್ -Vishwanews24

ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ : ನಳಿನ್ -Vishwanews24

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಕೊರೊನಾದಿಂದು ಗುಣಮುಖರಾಗಿದ್ದು, ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್‍ನಲ್ಲಿದ್ದಾರೆ.

ಈ ಬಗ್ಗೆ ಟ್ವೀಟ್‌ ಮೂಲಕ ತಿಳಿಸಿರುವ ಅವರು, ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕೊರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್ ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ನಾನು ಭಗವಂತನನ್ನು ಕಣ್ಣಾರೆ ನೋಡಿದವನಲ್ಲ. ಆದರೆ ತಮ್ಮ ಅಮೂಲ್ಯ ಪ್ರಾಣವನ್ನು ಪಣಕ್ಕಿಟ್ಟು ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ ಎಂದಿದ್ದಾರೆ.

ನಳಿನ್‌‌ ಕುಮಾರ್‌ ಕಟೀಲ್‌ ಅವರಿಗೆ ಆಗಸ್ಟ್‌ 30ರಂದು ಕೊರೊನಾ ಪಾಸಿಟಿವ್‌ ದೃಢಪಟ್ಟಿತ್ತು. ನಾನು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಟ್ವೀಟ್‌ ಮೂಲಕ ತಿಳಿಸಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago