Featured

ನಮ್ಮ ಐದು ವರ್ಷದ ಕಾಂಗ್ರೆಸ್ ಆಡಳಿತವನ್ನು ಜನ ಮತ್ತೆ ನೆನೆಪಿಸಿಕೊಳ್ಳುತ್ತಾರೆ, ನಮಗೆ ಅವಕಾಶ ಕೊಟ್ಟೇ ಕೊಡುತ್ತಾರೆ : ಸಿದ್ದರಾಮಯ್ಯ

ಬಿಜೆಪಿಯವರ ಅಪಪ್ರಚಾರವೇ ನಮ್ಮ ಸೋಲಿಗೆ ಪ್ರಮುಖ ಕಾರಣ ; ಅಪಪ್ರಚಾರಕ್ಕೆ ಪ್ರತಿಯಾಗಿ ಸತ್ಯ ಹೇಳಿ ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ಕಾಂಗ್ರೆಸ್ ವಿಫಲವಾಯಿತು ,ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಈ ನಡವಳಿಕೆಗೆ ಅವಕಾಶ ನೀಡಬಾರದು : ಸಿದ್ದರಾಮಯ್ಯ

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಡೆಸಿದ ಅಪಪ್ರಚಾರಕ್ಕೆ ಕಾಂಗ್ರೆಸ್‍ನಿಂದ ತಕ್ಕ ಪ್ರತ್ಯುತ್ತರ ನೀಡಲು ಸಾಧ್ಯವಾಗದೆ ಇರುವುದೇ ನಮ್ಮ ಸೋಲಿಗೆ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ಲೇಷಿಸಿದರು. ನಗರದ ಅರಮನೆ ಮೈದಾನದಲ್ಲಿ ಕೆಪಿಸಿಸಿ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಐದು ವರ್ಷ ನಮ್ಮ ಸರ್ಕಾರ ಒಳ್ಳೆಯ ಆಡಳಿತ ನೀಡಿತ್ತು. ಜನ ಮತ್ತೆ ನಮ್ಮನ್ನು ಅಧಿಕಾರಕ್ಕೆ ತರುತ್ತಾರೆ ಎಂಬ ವಿಶ್ವಾಸವಿತ್ತು. ಆದರೆ ಬಿಜೆಪಿಯ ಅಪಪ್ರಚಾರದಿಂದ ಅದು ಸಾಧ್ಯವಾಗಲಿಲ್ಲ. ಬಿಜೆಪಿಯವರು 30 ಜನ ಮತದಾರರಿಗೆ ಒಬ್ಬ ಕಾರ್ಯಕರ್ತನನ್ನು ನೇಮಿಸಿ ಕಾಂಗ್ರೆಸ್ ವಿರುದ್ಧ ಹಾಗೂ ಹಿಂದುತ್ವದ ಕುರಿತು ಮನೆಮನೆಗೆ ಹೋಗಿ ಸುಳ್ಳು ಪ್ರಚಾರಗಳನ್ನು ಮಾಡಿದರು. ಈ ಅಪಪ್ರಚಾರಕ್ಕೆ ಪ್ರತಿಯಾಗಿ ಸತ್ಯ ಹೇಳಿ ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ಕಾಂಗ್ರೆಸ್ ವಿಫಲವಾಯಿತು. ಇದಕ್ಕೆ ನಾನು ಯಾರನ್ನು ಹೊಣೆ ಮಾಡುವುದಿಲ್ಲ. ನಮ್ಮ ಸೋಲಿಗೆ ಬಿಜೆಪಿಯವರ ಅಪಪ್ರಚಾರವೇ ಪ್ರಮುಖ ಕಾರಣ ಎಂದು ಹೇಳಿದರು.

ಆದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಈ ನಡವಳಿಕೆಗೆ ಅವಕಾಶ ನೀಡಬಾರದು. ಮನೆ ಮನೆಗೆ ತೆರಳಿ ಪ್ರಚಾರ ಮಾಡಬೇಕು. ಐದು ವರ್ಷ ಕಾಂಗ್ರೆಸ್ ಆಡಳಿತವನ್ನು ಜನ ಮತ್ತೆ ನೆನೆಪಿಸಿಕೊಳ್ಳುತ್ತಾರೆ. ನಮಗೆ ಅವಕಾಶ ಕೊಟ್ಟೇ ಕೊಡುತ್ತಾರೆ. 28 ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ 20 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಬೇಕು. ಅದಕ್ಕಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ನೂತನ ಅಧ್ಛ್ಯಕ್ಷರಾದ ದಿನೇಶ್‍ಗುಂಡೂರಾವ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ ಅವರಿಗೆ ಎಲ್ಲಾ ರೀತಿಯ ಸಹಕಾರ, ಬೆಂಬಲ ನೀಡಬೇಕು ಎಂದು ಹೇಳಿದರು.

ರಾಹುಲ್‍ಗಾಂಧಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಿದ್ದ ನನ್ನ ಮೇಲೆ ಭಾರೀ ವಿಶ್ವಾಸವಿಟ್ಟಿದ್ದರು, ಚುನಾವಣೆ ಜವಾಬ್ದಾರಿ ನೀಡಿದ್ದರು. ಆದರೆ ನಾವು ನಿರೀಕ್ಷೆಯಷ್ಟು ಸ್ಥಾನಗಳನ್ನು ಗೆಲಲ್ಲಿಲ್ಲ. ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬರಲಿಲ್ಲ. ಅನಿವಾರ್ಯವಾಗಿ ಜೆಡಿಎಸ್ ಜೊತೆ ಮೈತ್ರಿ ಸರ್ಕಾರ ನಡೆಸುತ್ತಿದ್ದೇವೆ ಎಂದು ಹೇಳಿದರು.

ಜಾತ್ಯತೀತ ಶಕ್ತಿಗಳ ಹೊಂದಾಣಿಕೆ:
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜಾತ್ಯತೀತ ಶಕ್ತಿಗಳು ಒಂದಾಗಲಿವೆ. ಬಿಜೆಪಿಯವರ ಸುಳ್ಳು ಪ್ರಚಾರಗಳು ಯಶಸ್ವಿಯಾಗುವುದಿಲ್ಲ. ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲಲ್ಲಿದೆ. ರಾಹುಲ್‍ಗಾಂಧಿ ಪ್ರಧಾನಿಯಾಗುವ ದಟ್ಟ ಮುನ್ಸೂಚನೆ ಇದೆ. ಬಿಜೆಪಿ ಎರಡನೇ ಬಾರಿಗೆ ಅಧಿಕಾರಕ್ಕೆ ಬರುವುದಿಲ್ಲ. ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ. ಚುನಾವಣೆ ವೇಳೆ ಕೊಟ್ಟ ಯಾವ ಭರವಸೆ ಈಡೇರಿಸದ ಬಿಜೆಪಿಗೆ ಜನ ತಕ್ಕ ಪಾಠ ಕಲಿಸುತ್ತಾರೆ. ಭಾವನಾತ್ಮಕ ವಿಷಯಗಳ ಆಧಾರದ ಮೇಲೆ ಜನರನ್ನು ವಿಭಜಿಸುವ ಮತ್ತು ದಾರಿ ತಪ್ಪಿಸುವ ಸಂಘ ಪರಿವಾರ ಮತ್ತು ಬಿಜೆಪಿಯ ಪ್ರಯತ್ನ ವಿಫಳಗೊಳ್ಳಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

https://amzn.to/2zw9m1u

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

27 minutes ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

36 minutes ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

21 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

23 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

23 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

23 hours ago