ಮೈಸೂರು: ಗುರುವಾರ ಮಡಿಕೇರಿ ಪ್ರವಾಸ ಕೈಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಹಿಂದೂ ಸಂಘಟನೆಯವರು ಮೊಟ್ಟೆ ಒಡೆದು ಅಗೌರವ ತೋರಿದ್ದರು. ಈ ಘಟನೆಗೆ ಕಾಂಗ್ರೆಸ್ ಮಾತ್ರವಲ್ಲದೇ ಬಿಜೆಪಿ, ಜೆಡಿಎಸ್ ಕೂಡಾ ಅಸಮಾಧಾನ ವ್ಯಕ್ತಪಡಿಸಿತ್ತು. ಇದರ ಹಿನ್ನೆಲೆ ಶುಕ್ರವಾರ ಮಾತನಾಡಿದ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಮಾತನಾಡಿದ ಯತೀಂದ್ರ, ಸಾವರ್ಕರ್ ಬಗ್ಗೆ ಮಾತನಾಡಿದ್ದಕ್ಕೆ ನಮ್ಮ ತಂದೆ ಸಿದ್ದರಾಮಯ್ಯ ಅವರಿಗೆ ಜೀವಬೆದರಿಕೆಯಿದೆ. ಹಿಂದೂ ಸಂಘಟನೆಗಳಿಂದಲೇ ಬೆದರಿಕೆಗಳು ಬಂದಿವೆ ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ವಿರೋಧ ಪಕ್ಷದ ನಾಯಕರುಗಳಿಗೆ ಭದ್ರತೆ ಕೊಡಲು ವಿಫಲವಾಗಿದೆ. ಇನ್ನು ಜನರಿಗೆ ಹೇಗೆ ಭದ್ರತೆ ಕೊಡುತ್ತಾರೋ ಗೊತ್ತಿಲ್ಲ. ಜೊತೆಗೆ ಮೊಟ್ಟೆ ಒಡೆಸಿ ಹೇಡಿ ಕೃತ್ಯ ಮಾಡಿದೆ ಎಂದು ಕಿಡಿ ಕಾರಿದರು.
ಕೊನೆಗೂ ಶಿವಣ್ಣ ಅವರನ್ನ ಭೇಟಿಯಾಗಿ ತಮ್ಮ ಮಹಾದಾಸೆಯನ್ನ ಈಡೇರಿಸಿಕೊಂಡ ಕಾಫಿನಾಡು ಚಂದು – Vishwanews24
ಬಿಜೆಪಿ ಸರ್ಕಾರ ಮೊದಲು ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆ ಬಗ್ಗೆ ಗಮನ ಹರಿಸಬೇಕು. ಅದು ಬಿಟ್ಟು ವಿರೋಧ ಪಕ್ಷಗಳು ನೀಡುವ ಸಣ್ಣ ಪುಟ್ಟ ಹೇಳಿಕೆಗಳನ್ನು ಹಿಡಿದುಕೊಂಡು, ಅನಗತ್ಯ ಗೊಂದಲ ಸೃಷ್ಟಿಸಿ ಅಪಪ್ರಚಾರ ಮಾಡುತ್ತಿದೆ ಎಂದರು.
ಟೆರರಿಸ್ಟ್‌ಗಳು ಕೂಡಾ ದೇಶ ಪ್ರೇಮಿಗಳೇ ಆಗಿರುತ್ತಾರೆ. ಆದರೆ ಅವರು ಹಿಡಿಯುವ ದಾರಿ ತಪ್ಪಲ್ವಾ? ಅದರಂತೆಯೇ ಸಾವರ್ಕರ್ ಕೂಡಾ ದೇಶ ಪ್ರೇಮಿಯೇ ಆಗಿರಬಹುದು. ಆದರೆ ಆ ದೇಶ ಪ್ರೇಮವನ್ನು ವ್ಯಕ್ತಪಡಿಸುವುದಕ್ಕೋಸ್ಕರ ಹಿಂದೂಯೇತರ ಪ್ರಜೆಗಳನ್ನು ದೇಶದ ಭಾಗವಾಗಿರಬಾರದು, ಅವರು 2ನೇ ದರ್ಜೆಯ ಪ್ರಜೆಗಳಾಗಿರಬೇಕು ಹಾಗೂ ಅವರನ್ನು ದ್ವೇಷಿಸುವುದು ಈ ದೇಶಕ್ಕೆ ಮಾರಕ ಎಂದು ತಿಳಿಸಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…