ಬೆಂಗಳೂರು: ನಮ್ಮ ತಪ್ಪಿನಿಂದ ಪಂಜಾಬ್ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಇನ್ನೂ ಪೂರ್ಣಾವಾಗಿ ಫಲಿತಾಂಶ ಬಂದಿಲ್ಲ. ಪಂಜಾಬ್ನಲ್ಲಿ ಮಾತ್ರ ನಾವು ಅಧಿಕಾರದಲ್ಲಿದ್ದೆವು. ಬೇರೆ ರಾಜ್ಯಗಳಲ್ಲಿ ನಾವು ಅಧಿಕಾರದಲ್ಲಿರಲಿಲ್ಲ .ಉತ್ತರಖಂಡ, ಗೋವಾದಲ್ಲಿ ನಿರೀಕ್ಷೆ ಇತ್ತು. ನಮ್ಮ ತಪ್ಪಿನಿಂದ ಪಂಜಾಬ್ ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ. ಪಂಜಾಬ್ನಲ್ಲಿ ಬಿಜೆಪಿ ಬಂದಿಲ್ಲ ಬದಲಾಗಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಿದೆ. ಈ ಚುನಾವಣೆಗಳಿಂದ ನಾನೇನು ಬಹಳ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ಆದರೆ ಗೋವಾ, ಉತ್ತರಾ ಖಂಡದಲ್ಲಿ ಅಧಿಕಾರಕ್ಕೆ ಬರಬಹುದೆಂಬ ಅಂದಾಜು ಇತ್ತು ಎಂದರು.
ಈ ಚುನಾವಣೆಯಿಂದ ಧೈರ್ಯ ಕಳೆದುವಂಥದ್ದು ಏನಿಲ್ಲ ಎಂದ ಸಿದ್ದರಾಮಯ್ಯ, ಪಂಜಾಬ್ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದಾರಾ..? ಅಧಿಕಾರ ಇರುವ ರಾಜ್ಯಗಳಲ್ಲಿ ಗೆದ್ದಿದ್ದಾರೆ ಅಷ್ಟೆ. ಇದರಿಂದ ಬಹಳ ಜಂಬ ಪಡೆದುಕೊಳ್ಳಬೇಕಾಗಿಲ್ಲ ಎಂದು ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟು ನೀಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…