ಹೈದರಾಬಾದ್: ಶಾಲೆಯಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಮುಸ್ಲಿಂ ವಿದ್ಯಾರ್ಥಿನಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್‌ನ ತೀರ್ಪನ್ನು ಎಐಎಂಐಎಂ ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ತೀವ್ರವಾಗಿ ಖಂಡಿಸಿದ್ದಾರೆ.
ಈ ತೀರ್ಪನ್ನು “ಇಸ್ಲಾಂ ಮೇಲಿನ ದಾಳಿ” ಎಂದು ಕರೆದಿರುವ ಅವರು, ಇಸ್ಲಾಂ ಧರ್ಮದಲ್ಲಿ ಯಾವುದು ಅತ್ಯಗತ್ಯ, ಯಾವುದು ಅಲ್ಲ ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯಾರು ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:
“ಇದು ನಮ್ಮ ಧರ್ಮ, ಇದರಲ್ಲಿ ಯಾವುದು ಅತ್ಯಗತ್ಯ ಎಂಬುದನ್ನು ನಾವೇ ತೀರ್ಮಾನಿಸುತ್ತೇವೆ. ಅದನ್ನು ನಿರ್ಧರಿಸಲು ನ್ಯಾಯಾಧೀಶರು ಯಾರು? ಇದು ನಮ್ಮ ಧರ್ಮದ ಮೇಲಿನ ನೇರ ದಾಳಿ” ಎಂದು ಓವೈಸಿ ಆಕ್ರೋಶ ಹೊರಹಾಕಿದ್ದಾರೆ.ಧಾರ್ಮಿಕ ಅತ್ಯಗತ್ಯ ಆಚರಣೆಗಳಿಗೆ ಸಂಬಂಧಿಸಿದ ವಿಷಯವನ್ನು ಶಬರಿಮಲೆ ಪ್ರಕರಣದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ಪರಿಶೀಲಿಸುತ್ತಿರುವಾಗ, ಅಲಹಾಬಾದ್ ಹೈಕೋರ್ಟ್ ಈ ಕುರಿತು ತೀರ್ಪು ನೀಡಬಾರದಿತ್ತು ಎಂದು ಓವೈಸಿ ಹೇಳಿದರು.
ಈ ಆದೇಶವು ಸಂವಿಧಾನದ 19ನೇ ವಿಧಿ (ಅಭಿವ್ಯಕ್ತಿ ಸ್ವಾತಂತ್ರ್ಯ) ಮತ್ತು 25ನೇ ವಿಧಿ (ಧಾರ್ಮಿಕ ಸ್ವಾತಂತ್ರ್ಯ)ಗಳಿಗೆ ವಿರುದ್ಧವಾಗಿದೆ. ಆಕೆ ಹಿಜಾಬ್ ಧರಿಸುತ್ತಿರುವುದು ತಲೆಯ ಮೇಲೆಯೇ ಹೊರತು ಮನಸ್ಸಿನ ಮೇಲಲ್ಲ. ಈ ತೀರ್ಪಿನಿಂದ ಮುಸ್ಲಿಂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹಿನ್ನಡೆಯಾಗಲಿದೆ. ಉತ್ತರ ಪ್ರದೇಶದಲ್ಲಿ ಈಗಾಗಲೇ ಪ್ರೌಢಶಾಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳ ದಾಖಲಾತಿ ಪ್ರಮಾಣ ಅತ್ಯಂತ ಕಡಿಮೆಯಿದ್ದು, ಅವರ ಶಿಕ್ಷಣವನ್ನು ತಡೆಯುವ ಪ್ರಯತ್ನ ಇದಾಗಿದೆ ಎಂದು ಆರೋಪಿಸಿದರು.
ಇದನ್ನೂ ಓದಿ:
ಶಿಸ್ತು ಮತ್ತು ಸಮಾನತೆಯನ್ನು ಕಾಯ್ದುಕೊಳ್ಳಲು ಸಮವಸ್ತ್ರ ನಿಯಮ ಜಾರಿಗೊಳಿಸುವ ಸಂಪೂರ್ಣ ಸ್ವಾಯತ್ತತೆ ಶಿಕ್ಷಣ ಸಂಸ್ಥೆಗಳಿಗೆ ಇದೆ ಎಂಬ ನ್ಯಾಯಾಲಯದ ಅಭಿಪ್ರಾಯವನ್ನು ತಿರಸ್ಕರಿಸಿದ ಓವೈಸಿ, ಏಕರೂಪತೆಯೇ ಸಮಾನತೆಯಲ್ಲಎಂದು ಪ್ರತಿಪಾದಿಸಿದರು.
ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…
ಪುತ್ತೂರು: ಬ್ರೇಕ್ ಫೇಲ್ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…
ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ : ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲಿನವರೆಗೂ ನುಗ್ಗಿದ ನೀರು ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ…
ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ : ಬೆಂಬಲ ಕೋರಿ ಸಿಎಂಗೆ ಪತ್ರ ಬರೆದ ಕ್ಯಾ.ಚೌಟ ಮಂಗಳೂರು: ಮಂಗಳೂರು…
ಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ; ತೊಕ್ಕೊಟ್ಟುವಿನ ಹೋಟೆಲ್ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ ಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ಪತ್ತೆಯಾಗಿದೆ ಎಂಬ…