Featured

ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ.: ಹೆಚ್‌.ಡಿ.ಕುಮಾರಸ್ವಾಮಿ ಕಿಡಿ -Vishwanews24

ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ.: ಹೆಚ್‌.ಡಿ.ಕುಮಾರಸ್ವಾಮಿ ಕಿಡಿ -Vishwanews24

ಬೆಂಗಳೂರು: ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದಿದ್ದಾರೆ.

ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಸುವೆ ಎಂದು ಹೇಳಿದ್ದಾರೆ.

ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ ತಗಾದೆ ತೆಗೆದರೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದಿದ್ದಾರೆ.

ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ. ಕನ್ನಡಿಗರೆಂದರೆ -ಸಾಧುಂಗೆ ಸಾಧು, ಮಾಧುರ್ಯಂಗೆ ಮಾಧುರ್ಯನ್, ಬಾದಿಪ್ಪ ಕಲಿಗೆ ಕಲಿಯುಗ ವಿಪರೀತನ್ಎಂದು ಉಲ್ಲೇಖಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

24 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago