Featured

ನಮ್ಮ ಪಕ್ಷಕ್ಕೆ ಅಧಿಕಾರ ಕೊಟ್ಟರೆ ಈ ರಾಜ್ಯವನ್ನು ರಾಮರಾಜ್ಯ ಮಾಡುತ್ತೇನೆ : ಕುಮಾರಸ್ವಾಮಿ – Vishwanews24

ನಮ್ಮ ಪಕ್ಷಕ್ಕೆ ಅಧಿಕಾರ ಕೊಟ್ಟರೆ ಈ ರಾಜ್ಯವನ್ನು ರಾಮರಾಜ್ಯ ಮಾಡುತ್ತೇನೆ : ಕುಮಾರಸ್ವಾಮಿ

ಬಾದಾಮಿ: ಐದು ವರ್ಷದ ಅವಧಿಗೆ ನಮ್ಮ ಪಕ್ಷಕ್ಕೆ ಅಧಿಕಾರ ಕೊಟ್ಟರೆ ಈ ರಾಜ್ಯವನ್ನು ರಾಮರಾಜ್ಯ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ತಾಲೂಕಿನ ಕುಳಗೇರಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್‌ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷಕ್ಕೆ ಪೂರ್ಣ ಅಧಿಕಾರ ನೀಡಿದರೆ ರಾಜ್ಯದ ಪ್ರತಿ ಗ್ರಾಮಗಳಲ್ಲಿ ಇಂಗ್ಲಿಷ್‌ ಹಾಗೂ ಕನ್ನಡ ಮಾಧ್ಯಮದ ಉಚಿತ ಶಿಕ್ಷಣ. ಪ್ರತಿ ಗ್ರಾಮದಲ್ಲಿ ಉಚಿತ ಆರೋಗ್ಯ, ರೈತರಿಗೆ ಎಕರೆಗೆ 10 ಸಾವಿರ, ಪ್ರತಿ ವರ್ಷ ರೈತರು ಎಲ್ಲಿಯೂ ಸಾಲ ಪಡೆಯಬೇಕಿಲ್ಲ.

ದಿನಕ್ಕೆ 24 ಗಂಟೆ ಉಚಿತ ವಿದ್ಯುತ್‌ ನೀಡುತ್ತೇವೆ ಎಂದರು. ಈಗಾಗಲೇ ಸಾಲ ಮನ್ನಾ ಮಾಡಿ ತೋರಿಸಿದ್ದೇನೆ. ಮಾಜಿ ಶಾಸಕರ ಪ್ರತಿಷ್ಠಿತ ಸಹಕಾರಿ ಬ್ಯಾಂಕ್‌ನಿಂದ ರೈತರ ಮೇಲೆ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಬಂದರೆ ಆ ಸಹಕಾರಿ ಬ್ಯಾಂಕ್‌ ತನಿಖೆ ಮಾಡಿಸಿ, ಅದನ್ನು ಮುಚ್ಚಿಸುವ ಕೆಲಸ ಮಾಡುತ್ತೇವೆ. ಪ್ರತಿ ಮನೆಗೆ 5 ಸಾವಿರ ಕೊಡುತ್ತೇವೆ. ನದಿ ತೀರದಲ್ಲಿ ಸಂಕಷ್ಟದಲ್ಲಿದ್ದ ಜನರಿಗೆ ಮೂಲಭೂತ ಸೌಕರ್ಯ ಒದಗಿಸುತ್ತೇವೆ. ಈ ಬಾರಿ ಹನಮಂತ ಮಾವಿನಮರದಗೆ ಆಶೀರ್ವಾದ ಮಾಡಿ. ಬಾದಾಮಿ ತಾಲೂಕಿನ ಪ್ರತಿಯೊಂದು ಹಳ್ಳಿಗೂ, ಕಾಂಕ್ರಿಟ್‌ ರಸ್ತೆ, ಒಳಚರಂಡಿ, ಮೂಲಭೂತ ಸೌಕರ್ಯ ಒದಗಿಸುತ್ತೇವೆ ಎಂದರು.

ಚುನಾವಣೆಯಲ್ಲಿ ಮತ ಪಡೆದು ಸಿದ್ದರಾಮಯ್ಯ ಹಾಗೂ ಶ್ರೀರಾಮಲು ಈ ಭಾಗಕ್ಕೆ ಬಂದು ಜನರ ಕಷ್ಟಸುಖ ಕೇಳಲಿಲ್ಲ. ಸ್ವಾತಂತ್ರ್ಯ ಬಂದು 75 ವರ್ಷವಾದರೂ ಜನರ ಕಷ್ಟ ಪರಿಹಾರವಾಗಿಲ್ಲ. ಒಬ್ಬ ಎಂಎಲ್‌ಎ ಮನೆಯಲ್ಲಿ 8 ಕೋಟಿ ಸಿಗುತ್ತೆ ಅಂದ್ರೆ ನೀವು ಯೋಚನೆ ಮಾಡಿ. ಅಂತಹ ದುಡ್ಡಿನಿಂದ ನಿಮಗೆ ಕುಕ್ಕರ್‌ ಹಂಚುತ್ತಾರೆ. ಆಮಿಷಗಳಿಗೆ ಬಲಿಯಾಗಬೇಡಿರಿ ಎಂದು ಕುಮಾರಸ್ವಾಮಿ ಮತದಾರರಿಗೆ ಮನವಿ ಮಾಡಿದರು.

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

7 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

7 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

8 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

8 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

9 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

9 hours ago