ಬೆಂಗಳೂರು: ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ, ನಾವು ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ಸಂಬಂಧಿಸಿದಂತೆ ರೌಡಿ ಶೀಟರ್ ಗಳ ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ. ಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು. ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ, ನಮ್ಮ ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿರುವಂತೆ ಸೈಲೆಂಟ್ ಸುನೀಲ್ ರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಸಿಎಂ ಟ್ವೀಟ್ ಮೂಲಕ ಸ್ಪಷ್ಟ ಪಡಿಸಿದ್ದಾರೆ.
ರೌಡಿ ಶೀಟರ್ ಆಗಿದ್ದಂತ ಸೈಲೆಂಟ್ ಸುನೀಲ್ ಬಿಜೆಪಿ ನಾಯಕರನ್ನು ರಕ್ತದಾನ ಶಿಬಿರಕ್ಕೆ ಆಹ್ವಾನಿಸಿ, ಕಾರ್ಯಕ್ರಮ ಮಾಡಿದ್ದರ ಬಗ್ಗೆ ಕಾಂಗ್ರೆಸ್ ಪಕ್ಷ ಆಕ್ಷೇಪಿಸಿತ್ತು. ಅಲ್ಲದೇ ರೌಡಿಗಳ ತಾಣವಾಗುತ್ತಿದೆ ಬಿಜೆಪಿ ಎಂಬುದಾಗಿ ವಾಗ್ಧಾಳಿ ನಡೆಸಿತ್ತು. ಈ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರು ನಳೀನ್ ಕುಮಾರ್ ಕಟೀಲ್ ಅವರು ಸೈಲೆಂಟ್ ಸುನಿಲ್ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದಿದ್ದರು. ಈ ಬಳಿಕ ಈಗ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…