Featured

ನಮ್ಮ ಪ್ರಧಾನಿ ಯಾರೆಂಬುದು ಮುಖ್ಯವಲ್ಲ ; ಬಿಜೆಪಿ ಸೋಲಿಸೋದೇ ಮುಖ್ಯ : ಮಮತಾ ದೀದಿ

ನವದೆಹಲಿ:  2019ರ ಚುನಾವಣೆಯಲ್ಲಿ ಎಲ್ಲರೂ ಸಂಘಟಿತರಾಗಿ ಸಾಮೂಹಿಕ ನಾಯಕತ್ವದಲ್ಲಿ ಬಿಜೆಪಿಯನ್ನ ಸೋಲಿಸುವುದೇ ಮುಖ್ಯ ಅಂತ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಮೂಲಕ ಮಹಾಮೈತ್ರಿ ತಮ್ಮ ಪ್ರಧಾನಿ ಅಭ್ಯರ್ಥಿ ಯಾರು ಅನ್ನುವ ರಹಸ್ಯವನ್ನ ಬಹಿರಂಗಪಡಿಸುವುದಿಲ್ಲ ಅನ್ನೋ ಸೂಚನೆಯನ್ನ ಅವರು ನೀಡಿದ್ದಾರೆ.

ಸದ್ಯ ಮೂರು ದಿನಗಳ ದೆಹಲಿ ಪ್ರವಾಸದಲ್ಲಿರುವ ದೀದಿ, ಇಂದು ಸೋನಿಯಾ ಗಾಂಧಿ ಸೇರಿದಂತೆ ಹಲವು ನಾಯಕರನ್ನ ಭೇಟಿ ಮಾಡಲಿದ್ದಾರೆ. ಜನವರಿ 19ರಂದು ಕೊಲ್ಕತ್ತಾದಲ್ಲಿ ಆಯೋಜಿಸಿದ್ದು, ಇದಕ್ಕೆ ಬರುವಂತೆ ಎಲ್ಲರಿಗೂ ಮಮತಾ ಆಹ್ವಾನ ನೀಡಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಮಹಾಮೈತ್ರಿಯ ಬಲ ಪ್ರದರ್ಶನಕ್ಕೆ ದೀದಿ ವೇದಿಕೆ ಸಿದ್ಧಪಡಿಸುತ್ತಿದ್ದಾರೆ.

ಈ ವೇಳೆ ನೀವು ಮುಂದಿನ ಪ್ರಧಾನಿ ಅಭ್ಯರ್ಥಿಯಾ ಅಂತ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವ್ರು, 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನ ಸೋಲಿಸುವುದಕ್ಕಾಗಿ ಸಾಮೂಹಿಕ ನಾಯಕತ್ವವಿರುತ್ತದೆ. ನಾನು ವಿರೋಧ ಪಕ್ಷಗಳ ನಾಯಕರನ್ನ ಭೇಟಿಯಾಗುತ್ತೇನೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರನ್ನೂ ಭೇಟಿಯಾಗಿ ಱಲಿಗೆ ಆಹ್ವಾನಿಸುತ್ತೇನೆ ಅಂತ ತಿಳಿಸಿದರು.

ಆದರೆ, ಜನವರಿಯಲ್ಲಿ ಕೊಲ್ಕತ್ತಾದಲ್ಲಿ ನಡೆಯುವ  ಕೇವಲ ವಿಪಕ್ಷಗಳ, ಮಹಾಮೈತ್ರಿಯ ಬಲ ಪ್ರದರ್ಶನವಷ್ಟೇ ಅಲ್ಲದೆ, ಮಮತಾರ ಬಲ ಪ್ರದರ್ಶನವೂ ಆಗಲಿದೆ ಅಂತ ಹೇಳಲಾಗ್ತಿದೆ. ಈ ಮೂಲಕ ತಾವು ಕೂಡ ಪ್ರಧಾನಿ ಹುದ್ದೆಯ ರೇಸ್​ನಲ್ಲಿದ್ದೇನೆ ಅಂತ ಮಹಾಮೈತ್ರಿ ಕೂಟಕ್ಕೆ ತಿಳಿಸುವುದಕ್ಕೆ ದೀದಿ ಪ್ರಯತ್ನಿಸುತ್ತಿದ್ದಾರೆ ಅಂತ ಹೇಳಲಾಗ್ತಿದೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago