ನಟಿ ಶೃತಿ ಹರಿಹರನ್ ಅವರು ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದು, ಸರ್ಜಾ ಕುಟುಂಬ ಶೃತಿ ಹರಿಹರನ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದೆ.
ನಟಿ ಶ್ರುತಿ ಹರಿಹರನ್ ಮಾಡಿರುವ ಮೀ ಟೂ ಆರೋಪ ದೊಡ್ಡ ಚರ್ಚೆ ಆಗುತ್ತದೆ. ಅರ್ಜುನ್ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್ ನೀಡಿರುವ ಹೇಳಿಕೆಗೆ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಸರ್ಜಾ ಕುಟುಂಬದ ಸಹ ಈ ಘಟನೆ ಬಗ್ಗೆ ಮಾತನಾಡುತ್ತಿದೆ. ಈಗಾಗಲೇ ಅರ್ಜುನ್ ಸರ್ಜಾ ಅವರ ಮಾವ ನಟ ರಾಜೇಶ್ ಪ್ರತಿಕ್ರಿಯೆ ನೀಡಿದ್ದರು. ಇದೀಗ ನಟ ಧ್ರುವ ಸರ್ಜಾ ಸಹ ತಮ್ಮ ಮಾವನ ಮೇಲೆ ಬಂದಿರುವ ಆರೋಪದ ಬಗ್ಗೆ ಮಾತನಾಡಿದ್ದಾರೆ.
ಶ್ರುತಿ ಹರಿಹರನ್ ಗೆ ಓಪನ್ ಚಾಲೆಂಜ್ ಹಾಕಿರುವ ಧ್ರುವ ಸರ್ಜಾ, ”ಸಾಕ್ಷಿ ಇದೆ ಎಂದು ಹೇಳಿದ್ದಾರೆ, ಅವರ ಬಳಿ ಏನಾದರೂ ಸಾಕ್ಷಿ ಇದ್ದರೆ ತೋರಿಸಲಿ. ಪಬ್ಲಿಸಿಟಿ ತೆಗೆದುಕೊಂಡಿದ್ದು ಸಾಕು.” ಎಂದು ಹೇಳಿದ್ದಾರೆ.
”ಮೀಟೂ ಒಂದು ಒಳ್ಳೆಯ ವೇದಿಕೆ. ಅಲ್ಲಿ ಬಂದು ಎಲ್ಲರೂ ಹೇಳುವುದು ಒಳ್ಳೆಯದು. ಆದರೆ, ಅಲ್ಲಿ ಎಷ್ಟೊ ಪಾಸಿಟಿವ್ ಇದೆಯೋ ಅಷ್ಟೇ ನೆಗೆಟಿವ್ ಇದೆ. ನಾನು ಚಿಕ್ಕ ವಯಸ್ಸಿನಿಂದ ನಮ್ಮ ಅಂಕಲ್ ಅನ್ನು ನೋಡಿಕೊಂಡು ಬಂದಿದ್ದೇನೆ. ಅವರು ಏನು ಅಂತ ನನಗೆ ತುಂಬ ಚೆನ್ನಾಗಿ ಗೊತ್ತಿದೆ.” ಎಂದು ಹೇಳಿದರು..
‘ಪಬ್ಲಿಸಿಟಿ ತೆಗೆದುಕೊಂಡಿದ್ದು ಸಾಕು. ಮುಂದೆ ಬನ್ನಿ ಮಾತಾಡಿ. ಅವರ ವಯಸ್ಸಿನ ಮಗಳ ಅವರಿಗೆ ಇದ್ದಾರೆ. ಸುಮ್ಮನೆ ಮಾತನಾಡುವುದು ಸುಲಭ. ಯಾರೋ ಬಂದು ಏನೋ ಹೇಳಿದರೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ.”ಯಾವುದೋ ನಾಯಿ ನರಿ ಕ್ರಿಮಿ ಕೀಟಗಳು ಹೇಳಿದ್ದನ್ನು ನಾನು ಕೇಳುವುದಿಲ್ಲ. ಅವರಿಗೆ ಹೇಳಬೇಕು ಅಂತ ಅನಿಸಿದರೆ, ಅವತ್ತೇ ಹೇಳಬಹುದಿತ್ತು. ನಮ್ಮ ಮನೆ ದೇವರ ಬಗ್ಗೆ ನನಗೆ ಗೊತ್ತಿದೆ. ಸಾಕ್ಷಿ ಇದೇ ಎಂದರಲ್ಲ, ಇದ್ದರೆ ತೊರಿಸಲಿ.”. ಸಾಕ್ಷಿ ಇದ್ದರೆ ತೋರಿಸಲಿ ಎಂದು ಧೃವ ಸರ್ಜಾ ಖಡಕ್ ಸವಾಲು ಹಾಕಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…